2 ಪೂರ್ವಕಾಲ ವೃತ್ತಾಂತ 6:21 - ಪರಿಶುದ್ದ ಬೈಬಲ್21 ನಿನ್ನ ಜನರಾದ ಇಸ್ರೇಲರು ಮತ್ತು ನಾನು ಮಾಡುವ ಪ್ರಾರ್ಥನೆಯನ್ನು ಆಲೈಸು. ನಾವು ಈ ದೇವಾಲಯದ ಕಡೆಗೆ ತಿರುಗಿಕೊಂಡು ನಿನಗೆ ಪ್ರಾರ್ಥಿಸುವಾಗ ನಿನ್ನ ನಿವಾಸವಾದ ಪರಲೋಕದಿಂದ ನಮ್ಮ ಪ್ರಾರ್ಥನೆಯನ್ನು ಆಲೈಸು; ನಮ್ಮ ಪಾಪಗಳನ್ನು ಕ್ಷಮಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದಲ್ಲದೆ, ನೀನು ನಿನ್ನ ಸೇವಕನ ಹಾಗೂ ನಿನ್ನ ಪ್ರಜೆಗಳಾದ ಇಸ್ರಾಯೇಲರ ವಿಜ್ಞಾಪನೆಯನ್ನು ಲಾಲಿಸು. ಅವರು ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ವಿಜ್ಞಾಪನೆಯನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸುವಾಗ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹಗಳನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹಗಳನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ನೀವು ನಿಮ್ಮ ಸೇವಕನ ಮತ್ತು ನಿಮ್ಮ ಜನರಾದ ಇಸ್ರಾಯೇಲರ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.