Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:23 - ಪರಿಶುದ್ದ ಬೈಬಲ್‌

23 ಅದನ್ನು ನೀನು ಪರಲೋಕದಿಂದ ಆಲೈಸಿ ನಿನ್ನ ಸೇವಕರ ನ್ಯಾಯತೀರಿಸು. ಕೇಡುಮಾಡಿದವನನ್ನು ಶಿಕ್ಷಿಸು; ಅವನು ಇನ್ನೊಬ್ಬನಿಗೆ ಮಾಡಿದ ದುಷ್ಕೃತ್ಯವು ಅವನಿಗೇ ತಟ್ಟುವಂತೆ ಮಾಡು. ಯಾವನು ನಿರಪರಾಧಿಯೆಂಬುದನ್ನು ತೋರಿಸಿಕೊಟ್ಟು ಅವನ ನೀತಿಗೆ ತಕ್ಕಂತೆ ಪ್ರತಿಫಲ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ನೀನು ಪರಲೋಕದಿಂದ ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಮುಯ್ಯಿತೀರಿಸು; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀವು ಪರಲೋಕದಿಂದ ಅದನ್ನು ಕೇಳಿ ನಿಮ್ಮ ಭಕ್ತರ ವ್ಯಾಜ್ಯವನ್ನು ತೀರಿಸಿರಿ. ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ, ಅವನು ನೀತಿವಂತನೆಂದು ತೋರಿಸಿಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ಪರಲೋಕದಿಂದ ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಮುಯ್ಯಿತೀರಿಸು; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:23
13 ತಿಳಿವುಗಳ ಹೋಲಿಕೆ  

ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ತಂದೆಯು ಹೊತ್ತುಕೊಳ್ಳುವದಿಲ್ಲ. ಒಬ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತ್ವವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.


ಸೈನ್ಯವು ಬಂದು ಬಾಬಿಲೋನನ್ನು ನಾಶಮಾಡುವುದು. ಬಾಬಿಲೋನಿನ ಸೈನಿಕರನ್ನು ವಶಪಡಿಸಿಕೊಳ್ಳಲಾಗುವುದು. ಅವರ ಬಿಲ್ಲುಗಳನ್ನು ಮುರಿಯಲಾಗುವುದು. ಏಕೆಂದರೆ ಯೆಹೋವನು ಜನರನ್ನು ಅವರು ಮಾಡುವ ದುಷ್ಕೃತ್ಯಗಳಿಗಾಗಿ ಶಿಕ್ಷಿಸುತ್ತಾನೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಸಂಪೂರ್ಣವಾಗಿ ಕೊಡುತ್ತಾನೆ.


ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.


ಆದ್ದರಿಂದ ನೀವು ನಿಮ್ಮ ದುರ್ನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.


ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!


ಯೆಹೋವನು, ‘ನೀನು ನಿನ್ನೆ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ಯಾವ ಹೊಲದಲ್ಲಿ ಸುರಿಸಿದೆಯೋ ಅದೇ ಹೊಲದಲ್ಲಿ ನಿನಗೆ ಮುಯ್ಯಿ ತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುವುದಲ್ಲವೇ? ಯೆಹೋವನ ಮಾತು ನೆರವೇರುವಂತೆ ಯೋರಾಮನ ದೇಹವನ್ನು ತೆಗೆದು ಅದೇ ಹೊಲದಲ್ಲಿ ಎಸೆದುಬಿಡು!” ಎಂದು ಹೇಳಿದನು.


“ನಿಮ್ಮಲ್ಲಿ ಯಾರಿಗಾದರೂ ಇಬ್ಬರಿಗೆ ವಾಗ್ವಾದವಿದ್ದಲ್ಲಿ ಅವರು ಅದನ್ನು ನ್ಯಾಯಸ್ಥಾನಕ್ಕೆ ತೆಗೆದುಕೊಂಡು ಹೋಗಲಿ. ಅಲ್ಲಿ ನ್ಯಾಯಾಧೀಶರು ಯಾರು ಸರಿ ಯಾರು ತಪ್ಪು ಎಂದು ತೀರ್ಮಾನಿಸುವರು.


ಅವಳು ಅಶುದ್ಧಳಾಗಿದ್ದರೆ ಮತ್ತು ತನ್ನ ಗಂಡನಿಗೆ ವಿರುದ್ಧವಾಗಿ ಪಾಪಮಾಡಿದ್ದರೆ, ನೀರು ಅವಳಿಗೆ ಹಾನಿಯನ್ನು ಉಂಟುಮಾಡುವುದು, ನೀರು ಅವಳೊಳಗೆ ಹೋಗಿ ಅವಳಿಗೆ ಮಹಾಸಂಕಟವನ್ನು ಉಂಟುಮಾಡುವುದು. ನೀರು ಅವಳನ್ನು ಆ ಕೂಡಲೇ ಬಂಜೆಯನ್ನಾಗಿ ಮಾಡುವುದು. ಅವಳು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗಿರುವಳು.


ಆದರೆ ಉಳಿದ ಜನರು ಸ್ವಾರ್ಥಿಗಳಾಗಿದ್ದು, ಸತ್ಯವನ್ನು ಅನುಸರಿಸದೆ ದುಷ್ಟತ್ವವನ್ನು ಅನುಸರಿಸುವವರಾಗಿದ್ದಾರೆ. ಅವರ ಮೇಲೆ ದೇವರ ದಂಡನೆಯೂ ಕೋಪವೂ ಬರುತ್ತದೆ.


“ಒಬ್ಬನು ಇನ್ನೊಬ್ಬನಿಗೆ ವಿರುದ್ಧವಾಗಿ ದುಷ್ಕೃತ್ಯ ನಡೆಸಿದ್ದರೂ ನಿನ್ನ ಯಜ್ಞವೇದಿಕೆಯ ಮುಂದೆ ಬಂದು ತಾನು ಮಾಡಿಲ್ಲವೆಂದು ನಿನ್ನ ಹೆಸರಿನಲ್ಲಿ ಪ್ರಮಾಣ ಮಾಡಿದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು