Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:25 - ಪರಿಶುದ್ದ ಬೈಬಲ್‌

25 ಆಗ ನೀನು ಪರಲೋಕದಿಂದ ಅವರ ಮೊರೆಯನ್ನು ಲಾಲಿಸಿ, ನಿನ್ನ ಜನರ ಪಾಪಗಳನ್ನು ಮನ್ನಿಸು. ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮತ್ತೆ ಬರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷಮಿಸಿ, ಅವರಿಗೂ ಅವರ ಪೂರ್ವಿಕರಿಗೂ ನೀನು ಕೊಟ್ಟಿರುವ ಸ್ವದೇಶಕ್ಕೆ ಅವರನ್ನು ತಿರುಗಿ ಬರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನೀವು ಪರಲೋಕದಿಂದ ಆಲಿಸಿ ಅವರ ಪಾಪಗಳನ್ನು ಕ್ಷಮಿಸಿ, ಅವರಿಗೂ ಅವರ ಪಿತೃಗಳಿಗೂ ನೀವು ಕೊಟ್ಟ ನಾಡಿಗೆ ಅವರನ್ನು ಮರಳಿ ಬರಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರಿಗೂ ಅವರ ಪಿತೃಗಳಿಗೂ ನೀನು ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:25
8 ತಿಳಿವುಗಳ ಹೋಲಿಕೆ  

ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು.


“ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ವೈರಿಗಳು ಬಂದು ಅವರನ್ನು ಯುದ್ಧದಲ್ಲಿ ಸೋಲಿಸಿದರೂ ನಿನ್ನ ಜನರು ನಿನ್ನ ಕಡೆಗೆ ತಿರುಗಿ ತಮ್ಮ ಪಾಪಗಳನ್ನು ಒಪ್ಪಿಕೊಂಡು ಈ ದೇವಾಲಯಕ್ಕೆ ಬಂದು ನಿನ್ನ ಹೆಸರನ್ನು ಹೇಳಿಕೊಂಡು ನಿನಗೆ ಪ್ರಾರ್ಥಿಸಿ ಬೇಡಿಕೊಂಡರೆ


“ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ನೀನು ಆಕಾಶದಿಂದ ಮಳೆ ಬೀಳದಂತೆ ತಡೆದಾಗ ನಿನ್ನ ಜನರು ಪಶ್ಚಾತ್ತಾಪಪಟ್ಟು ಈ ದೇವಾಲಯದ ಕಡೆಗೆ ತಿರುಗಿ ನಿನ್ನನ್ನು ಪ್ರಾರ್ಥಿಸಿ ತಮ್ಮ ಪಾಪಗಳನ್ನು ಬಿಟ್ಟುಬಿಟ್ಟರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು