Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:27 - ಪರಿಶುದ್ದ ಬೈಬಲ್‌

27 ನೀನು ಪರಲೋಕದಿಂದ ಅವರನ್ನು ಆಲೈಸು. ಇಸ್ರೇಲರು ನಿನ್ನ ಸೇವಕರೂ ಪ್ರಜೆಗಳೂ ಆಗಿದ್ದಾರೆ. ಅವರು ಬದುಕುವಂತೆ ಸರಿಯಾದ ಮಾರ್ಗವನ್ನು ಅವರಿಗೆ ತೋರ್ಪಡಿಸು. ಅವರ ದೇಶದ ಮೇಲೆ ಮಳೆಯನ್ನು ಸುರಿಸು. ನಿನ್ನ ಜನರಿಗೆ ನೀನು ಆ ದೇಶವನ್ನೇ ಸ್ವಾಸ್ತ್ಯವಾಗಿ ಕೊಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಪರಲೋಕದಿಂದ ನೀನು ಲಾಲಿಸಿ ನಿನ್ನ ಸೇವಕರು ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗಳಿಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ, ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ಈ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಪರಲೋಕದಲ್ಲಿರುವ ನೀನು ಲಾಲಿಸಿ ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲ್ಯರ ಪಾಪಗಳನ್ನು ಕ್ಷವಿುಸಿ ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ ನಿನ್ನ ಪ್ರಜೆಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸಿ, ನಿಮ್ಮ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:27
24 ತಿಳಿವುಗಳ ಹೋಲಿಕೆ  

ವಸಂತ ಕಾಲದಲ್ಲಿ ಮಳೆಗಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಯೆಹೋವನು ಮಿಂಚನ್ನು ಕಳುಹಿಸುವನು; ಆಗ ಮಳೆ ಸುರಿಯುವುದು ಮತ್ತು ದೇವರು ಎಲ್ಲರ ಹೊಲಗಳಲ್ಲಿ ಸಸಿಗಳು ಬೆಳೆಯುವಂತೆ ಮಾಡುವನು.


ಯೆಹೂದದ ಜನರು, ‘ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯಿಂದಿರಬೇಕು. ಆತನು ನಮಗೆ ಸರಿಸಮಯದಲ್ಲಿ ಮುಂಗಾರು ಮತ್ತು ಹಿಂಗಾರುಮಳೆ ಸುರಿಸುತ್ತಾನೆ. ಸರಿಸಮಯಕ್ಕೆ ಫಸಲನ್ನು ಬರಮಾಡುತ್ತಾನೆ’ ಎಂದು ತಮ್ಮ ಹೃದಯದಲ್ಲಿ ಅಂದುಕೊಳ್ಳುವದಿಲ್ಲ.


ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು.


‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


ಆದ್ದರಿಂದ ಚೀಯೋನಿನ ಜನರೇ, ಸಂತೋಷಪಡಿರಿ. ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. ಆತನು ನಿಮಗೆ ಮಳೆ ಸುರಿಸುವನು. ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು.


ನಾನು ನನ್ನ ಕುರಿಗಳನ್ನೂ ನನ್ನ ಬೆಟ್ಟದ ಸುತ್ತಲೂ ಇರುವ ಸ್ಥಳಗಳನ್ನೂ ಆಶೀರ್ವದಿಸುವೆನು. ಸರಿಯಾದ ಸಮಯಕ್ಕೆ ಮಳೆ ಬೀಳುವಂತೆ ಮಾಡುವೆನು. ಮತ್ತು ಅದನ್ನು ಆಶೀರ್ವಾದದ ಸುರಿಮಳೆಯಂತೆ ಸುರಿಸುವೆನು.


ಯೆರೆಮೀಯನೇ, ನಾವು ಎಲ್ಲಿಗೆ ಹೋಗಬೇಕು, ಏನು ಮಾಡಬೇಕು ಎಂಬುದನ್ನು ಹೇಳಬೇಕೆಂದು ನಿನ್ನ ದೇವರನ್ನು ಪ್ರಾರ್ಥಿಸು” ಎಂದರು.


ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ಆದರೆ ನೀವು ತಪ್ಪು ಕಾರ್ಯಮಾಡಿದರೆ, ದುಷ್ಟತ್ವದಲ್ಲಿ ಜೀವಿಸಿದರೆ ನಿಮ್ಮ ಹಿಂದಿನಿಂದ ಒಂದು ಸ್ವರ, “ಇದು ಸರಿಯಾದ ಮಾರ್ಗ. ಈ ಮಾರ್ಗದಲ್ಲಿ ಮುಂದುವರಿಯಿರಿ” ಎಂದು ಹೇಳುವುದು ಕೇಳಿಸುವದು.


ಯೆಹೋವನೇ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು, ಆಗ ಅವುಗಳನ್ನು ಅನುಸರಿಸುವೆನು.


ದೇವರೇ, ನೀನು ಮಳೆ ಸುರಿಸಿ, ಒಣಗಿ ಕೃಶವಾಗಿದ್ದ ಭೂಮಿಯನ್ನು ಫಲವತ್ತು ಮಾಡಿದೆ.


ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಅತ್ಯುತ್ತಮವಾದ ಜೀವಮಾರ್ಗವನ್ನು ತೋರಿಸುವನು.


ಯೆಹೋವನು ಒಳ್ಳೆಯವನೂ ಸತ್ಯಸ್ವರೂಪನೂ ಆಗಿದ್ದಾನೆ. ಆತನು ಪಾಪಿಗಳಿಗೆ ಜೀವಮಾರ್ಗವನ್ನು ಬೋಧಿಸುವನು.


ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು.


ಇದು ಯೆಹೋವನ ಸಂದೇಶ: “ನಿಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಬನ್ನಿರಿ, ನೀವು ದುಷ್ಟತ್ವವನ್ನು ನಡಿಸಿರುವದರಿಂದ ದುಃಖಿಸಿರಿ, ಅಳಿರಿ, ಉಪವಾಸ ಮಾಡಿರಿ.


ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು