Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:30 - ಪರಿಶುದ್ದ ಬೈಬಲ್‌

30 ನೀನು ಪರಲೋಕದಿಂದ ಅವರ ಮೊರೆಯನ್ನು ಆಲೈಸಿ ಅವರ ಪ್ರಾರ್ಥನೆಗೆ ಉತ್ತರವನ್ನು ದಯಪಾಲಿಸು; ಪ್ರತಿಯೊಬ್ಬನಿಗೂ ತಕ್ಕ ಪ್ರತಿಫಲವನ್ನು ಕೊಡು. ಯಾಕೆಂದರೆ ಪ್ರತಿಯೊಬ್ಬನ ಹೃದಯವನ್ನು ನೀನೊಬ್ಬನೇ ತಿಳಿದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ. ಮನುಷ್ಯರ ಅಂತರಂಗಗಳನ್ನು ಬಲ್ಲವರು ನೀವೊಬ್ಬರೇ. ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕಹಾಗೆ ಫಲವನ್ನು ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪ ಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀವು ವಾಸಮಾಡುವ ಪರಲೋಕದಿಂದ ಕೇಳಿ ಮನ್ನಿಸಿ, ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:30
18 ತಿಳಿವುಗಳ ಹೋಲಿಕೆ  

“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ಜನರ ಬಗ್ಗೆ ಆತನಿಗೆ ಯಾರೂ ತಿಳಿಸುವ ಅಗತ್ಯವಿರಲಿಲ್ಲ. ಮನುಷ್ಯನ ಮನಸ್ಸಿನಲ್ಲಿ ಏನಿದೆ ಎಂಬುದು ಯೇಸುವಿಗೆ ಗೊತ್ತಿತ್ತು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.


ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.


ನನ್ನ ಒಡೆಯನೇ, ನೀನು ಪ್ರೀತಿಸ್ವರೂಪನಾಗಿರುವೆ. ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವವನು ನೀನೇ.


ದಯವಿಟ್ಟು ಅವನ ಪ್ರಾರ್ಥನೆಯನ್ನು ನಿನ್ನ ನಿವಾಸವಾದ ಪರಲೋಕದಿಂದ ಆಲಿಸಿ, ಜನರನ್ನು ಕ್ಷಮಿಸಿ, ಅವರಿಗೆ ಸಹಾಯ ಮಾಡು. ಜನರು ನಿಜವಾಗಿ ಆಲೋಚಿಸುವ ಸಂಗತಿಗಳು ನಿನಗೆ ಮಾತ್ರ ತಿಳಿದಿವೆ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಗೂ ತೀರ್ಪುನೀಡು ಮತ್ತು ಅವನಿಗೆ ನ್ಯಾಯವಾದದ್ದನ್ನು ಮಾಡು.


ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.


ತಮ್ಮ ಸಂಕಟಗಳ ಕುರಿತು ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಮೊರೆಯಿಡುವದಾದರೆ,


ಆಗ, ನಮ್ಮ ಪೂರ್ವಿಕರಿಗೆ ನೀನು ಅನುಗ್ರಹಿಸಿದ ದೇಶದಲ್ಲಿರುವ ನಿನ್ನ ಜನರು ನಿನಗೆ ಭಯಭಕ್ತಿಯಿಂದ ಸೇವೆ ಮಾಡುವರು.


ಮೃತ್ಯುಲೋಕದಲ್ಲಿ ನಡೆಯುತ್ತಿರುವುದು ಯೆಹೋವನಿಗೆ ತಿಳಿದಿದೆ. ಜನರ ಹೃದಯಗಳಲ್ಲಿರುವ ಆಲೋಚನೆಗಳು ಸಹ ಆತನಿಗೆ ಗೊತ್ತಿವೆ.


ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.”


ನನ್ನ ಗುರಾಣಿಯು ದೇವರೇ. ಆತನು ಯಥಾರ್ಥವಂತರನ್ನು ರಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು