38 ತಮ್ಮ ಹೃದಯಪೂರ್ವಕವಾಗಿ ತಮ್ಮ ದೇಶದ ಕಡೆಗೆ, ಅಂದರೆ ನೀನು ಅವರ ಪೂರ್ವಿಕರಿಗೆ ಕೊಟ್ಟ ಈ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿಸಿದ ಈ ದೇವಾಲಯದ ಕಡೆಗೂ ಮುಖಮಾಡಿಕೊಂಡು ಪ್ರಾರ್ಥಿಸುವಾಗ,
38 ನಿನ್ನ ಕಡೆಗೆ ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ತಿರುಗಿ, ನೀನು ಅವರ ಪೂರ್ವಿಕರಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿರುವ ಈ ಆಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥನೆಯನ್ನು ಮಾಡಿದರೆ,
38 ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೆ, ನೀವು ಆರಿಸಿಕೊಂಡ ಪಟ್ಟಣದ ಕಡೆಗೆ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೆ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗೂ ಪೂರ್ಣಪ್ರಾಣದಿಂದ ನಿಮ್ಮನ್ನು ಪ್ರಾರ್ಥಿಸಿದರೆ,
38 ನಿನ್ನ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು - ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು ಎಂದು ಒಪ್ಪಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿನ್ನನ್ನು ಪ್ರಾರ್ಥಿಸುವದಾದರೆ
38 ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ನಿಮಗೆ ಪ್ರಾರ್ಥನೆಮಾಡಿದರೆ,
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.
“ನೀನು ನಿನ್ನ ಜನರನ್ನು ಅವರ ವೈರಿಗಳ ವಿರುದ್ಧವಾಗಿ ಯುದ್ಧಮಾಡಲು ಒಂದು ಸ್ಥಳಕ್ಕೆ ಕಳುಹಿಸುವಾಗ ನೀನು ಆರಿಸಿಕೊಂಡ ಈ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿದ ಈ ದೇವಾಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥಿಸಿದರೆ
ಒಂದುವೇಳೆ ಅವರು ಪಶ್ಚಾತ್ತಾಪಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ತಾವು ಸೆರೆಯಲ್ಲಿರುವ ದೇಶದಿಂದ ನಿನಗೆ ಮೊರೆಯಿಟ್ಟು, ‘ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ. ನಾವು ದುಷ್ಟತ್ವದಲ್ಲಿ ಜೀವಿಸಿದ್ದೇವೆ’ ಎಂದು ಅರಿಕೆಮಾಡಿ