2 ಪೂರ್ವಕಾಲ ವೃತ್ತಾಂತ 6:40 - ಪರಿಶುದ್ದ ಬೈಬಲ್40 ನನ್ನ ದೇವರೇ, ಈ ಸ್ಥಳದಲ್ಲಿ ಪ್ರಾರ್ಥಿಸುವ ನಮ್ಮನ್ನು ವೀಕ್ಷಿಸಿ ನಮ್ಮ ಪ್ರಾರ್ಥನೆಗೆ ಕಿವಿಗೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 “ನನ್ನ ದೇವರೇ, ಕಟಾಕ್ಷವಿಡಿ, ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 “ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿಮ್ಮ ಕಣ್ಣುಗಳು ತೆರೆದಿರಲಿ. ನಿಮ್ಮ ಕಿವಿಗಳು ಆಲಿಸುತ್ತಾ ಇರಲಿ. ಅಧ್ಯಾಯವನ್ನು ನೋಡಿ |
“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”