41 “ದೇವರಾದ ಯೆಹೋವನೇ, ಎದ್ದು ನಿನ್ನ ಸಾಮರ್ಥ್ಯವನ್ನು ತೋರಿಸುವ ಒಡಂಬಡಿಕೆಯ ಪೆಟ್ಟಿಗೆಯೊಡನೆ ನಿನ್ನ ವಾಸಸ್ಥಳಕ್ಕೆ ಬಾ. ನಿನ್ನ ಯಾಜಕರು ರಕ್ಷಣಾವಸ್ತ್ರವನ್ನು ಧರಿಸಿಕೊಂಡಿರಲಿ; ನಿನ್ನನ್ನು ಪ್ರೀತಿಸುವವರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.
41 ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.
41 ದೇವರಾದ ಸರ್ವೇಶ್ವರಾ, ಎದ್ದು ಬನ್ನಿ, ನಿಮ್ಮ ತೇಜೋಮಯ ಮಂಜೂಷದೊಡನೆ ನಿಮ್ಮ ವಾಸಸ್ಥಾನದೊಳಗೆ ಸೇರಿಕೊಳ್ಳಿ. ದೇವರಾದ ಸರ್ವೇಶ್ವರಾ, ನಿಮ್ಮ ಯಾಜಕರು ರಕ್ಷಣೆಯೆಂಬ ಕವಚವನ್ನು ಹೊದ್ದುಕೊಳ್ಳಲಿ, ನಿಮ್ಮ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.
41 ದೇವರಾದ ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ ನಿನ್ನ ವಾಸಸ್ಥಾನದೊಳಗೆ ಸೇರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.
41 “ಈಗ ದೇವರಾದ ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ. ಯೆಹೋವ ದೇವರೇ, ನಿಮ್ಮ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ. ನಿಮ್ಮ ಭಕ್ತರು ಒಳ್ಳೆಯದರಲ್ಲಿ ಸಂತೋಷಪಡಲಿ.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ಎಲ್ಲರೂ ಸೇರಿಬಂದಾಗ ದಾವೀದನು ನಿಂತು ಹೇಳಿದ್ದೇನೆಂದರೆ, “ನನ್ನ ಜನರೇ, ನನ್ನ ಸಹೋದರರೇ, ನನ್ನ ಮಾತುಗಳನ್ನು ಕೇಳಿರಿ. ನಮ್ಮ ದೇವರ ಒಡಂಬಡಿಕೆಯ ಪೆಟ್ಟಿಗೆಗೋಸ್ಕರ ಒಂದು ಯೋಗ್ಯಸ್ಥಳವನ್ನು ನಿರ್ಮಿಸಬೇಕೆಂದು ನನ್ನ ಮನಸ್ಸಿನಲ್ಲಿತ್ತು. ಆ ಸ್ಥಳವು ದೇವರ ಪಾದಪೀಠವಾಗಬೇಕು. ಅದಕ್ಕಾಗಿ ನಾನು ದೇವರಿಗೆ ಆಲಯವನ್ನು ಕಟ್ಟಿಸಲು ಯೋಜನೆಯನ್ನು ಹಾಕಿದೆನು.
ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!
ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.
ನಯವಾದ ನಾರುಮಡಿಯನ್ನು ವಧುವಿಗೆ ಧರಿಸಲು ನೀಡಲಾಗಿತ್ತು. ಆ ನಾರುಮಡಿಯು ಪ್ರಕಾಶಮಾನವಾಗಿತ್ತು ಹಾಗೂ ಶುಭ್ರವಾಗಿತ್ತು.” (ನಯವಾದ ನಾರುಮಡಿಯೆಂದರೆ ದೇವರ ಪರಿಶುದ್ಧ ಜನರು ಮಾಡಿದ ಒಳ್ಳೆಯ ಕಾರ್ಯಗಳು ಎಂದರ್ಥ.)
ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.
ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.
ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”
ನಿನ್ನ ಸೇವಕರನ್ನು ಆರಿಸಿಕೊಂಡಾತನು ನೀನೇ. ನಿನ್ನ ಆಲಯಕ್ಕೆ ಬಂದು ನಿನ್ನನ್ನು ಆರಾಧಿಸಲು ನಮ್ಮನ್ನು ಆರಿಸಿಕೊಂಡಾತನು ನೀನೇ. ನಿನ್ನ ಮಹಾಪವಿತ್ರ ಆಲಯದ ಸೌಭಾಗ್ಯದಿಂದ ನಾವು ಉಲ್ಲಾಸಗೊಂಡಿದ್ದೇವೆ.
ಯಾಜಕರು ಯೆಹೋವನ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವರು. ಯೆಹೋವನು ಸರ್ವಲೋಕದ ಒಡೆಯನಾಗಿದ್ದಾನೆ. ಅವರು ಆ ಪೆಟ್ಟಿಗೆಯನ್ನು ನಿಮ್ಮ ಮುಂದೆ ಜೋರ್ಡನ್ ನದಿಯಲ್ಲಿ ತೆಗೆದುಕೊಂಡು ಹೋಗುವರು. ಅವರು ನೀರಿನಲ್ಲಿ ಪ್ರವೇಶ ಮಾಡಿದಾಗ ಜೋರ್ಡನ್ ನದಿಯ ನೀರು ಹರಿಯದೆ ನಿಂತುಬಿಡುವುದು. ನೀರು ಮುಂದಕ್ಕೆ ಹರಿಯದೆ ಹರಡಿಕೊಂಡು ಸರೋವರದಂತೆ ತೋರುವುದು” ಎಂದು ತಿಳಿಸಿದನು.