ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ: ‘ನಾನು ದಾವೀದನಿಗೆ ಮಾಡಿದ ಸತ್ಯವೂ ಪವಿತ್ರವೂ ಆದ ವಾಗ್ದಾನಗಳನ್ನು ನಿನಗೆ ಕೊಡುತ್ತೇನೆ.’
ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.
ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.
ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ ನಿನ್ನ ಆಲಯದಲ್ಲಿ ಒಂದು ದಿನವಿರುವುದೇ ಉತ್ತಮ. ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ.