2 ಪೂರ್ವಕಾಲ ವೃತ್ತಾಂತ 6:6 - ಪರಿಶುದ್ದ ಬೈಬಲ್6 ಆದರೆ ಈಗ ನಾನು ನನ್ನ ಹೆಸರನ್ನು ಸ್ಥಾಪಿಸಲು ಜೆರುಸಲೇಮನ್ನು ಆರಿಸಿಕೊಂಡಿದ್ದೇನೆ; ದಾವೀದನನ್ನು ನನ್ನ ಜನರ ನಾಯಕನನ್ನಾಗಿ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ಈಗ ನನ್ನ ನಾಮಸ್ಥಾಪನೆಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಆಳುವದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.
ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿದಂದಿನಿಂದ ಈ ದಿವಸದ ತನಕ ನಾನು ಮನೆಯಲ್ಲಿ ವಾಸವಾಗಿರಲಿಲ್ಲ. ನಾನು ಗುಡಾರದಲ್ಲಿಯೇ ಇದ್ದುಕೊಂಡು ಸಂಚರಿಸುತ್ತಿದ್ದೆನು. ಇಸ್ರೇಲರ ನಾಯಕರಾಗುವದಕ್ಕೆ ನಾನು ಕೆಲವರನ್ನು ಆರಿಸಿಕೊಂಡಿದ್ದೇನೆ. ಆ ನಾಯಕರು ನನ್ನ ಜನರಿಗೆ ಕುರುಬರಂತಿದ್ದಾರೆ. ಅವರೊಂದಿಗೆ ನಾನು ಬೇರೆಬೇರೆ ಸ್ಥಳಗಳಿಗೆ ಸಂಚರಿಸುತ್ತಿದ್ದಾಗ ನಾನೆಂದೂ ನನಗೊಂದು ಆಲಯವನ್ನು ದೇವದಾರು ಮರದಿಂದ ಕಟ್ಟಲು ಕೇಳಿಕೊಂಡಿರಲಿಲ್ಲ.’