Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:1 - ಪರಿಶುದ್ದ ಬೈಬಲ್‌

1 ಸೊಲೊಮೋನನು ಪ್ರಾರ್ಥಿಸುವದನ್ನು ನಿಲ್ಲಿಸಿದ ಕೂಡಲೇ ಆಕಾಶದಿಂದ ಬೆಂಕಿಯು ಬಂದು ಯಜ್ಞವೇದಿಕೆಯ ಮೇಲಿದ್ದ ಸರ್ವಾಂಗಹೋಮಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು. ಯೆಹೋವನ ಮಹಿಮೆಯು ದೇವಾಲಯದಲ್ಲಿ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿ ಇಳಿದು ಬಂದು ದಹನಬಲಿದ್ರವ್ಯಗಳನ್ನೂ ಬಲಿಮಾಂಸವನ್ನೂ ದಹಿಸಿಬಿಟ್ಟಿತು; ಸರ್ವೇಶ್ವರನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೊಲೊಮೋನನು ಪ್ರಾರ್ಥಿಸುವದನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿಬಿದ್ದು ಸರ್ವಾಂಗ ಹೋಮದ್ರವ್ಯಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು, ಯೆಹೋವನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ, ಬೆಂಕಿಯು ಆಕಾಶದಿಂದ ಇಳಿದು ದಹನಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:1
26 ತಿಳಿವುಗಳ ಹೋಲಿಕೆ  

ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಞವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಆ ಹಳ್ಳದಲ್ಲಿದ್ದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು.


ಅಲ್ಲಿ ದೇವರನ್ನು ಆರಾಧಿಸಲು ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ದಾವೀದನು ಅದರ ಮೇಲೆ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿದನು. ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಪರಲೋಕದಿಂದ ಬೆಂಕಿಯನ್ನು ಕಳುಹಿಸುವುದರ ಮೂಲಕ ದಾವೀದನಿಗೆ ಉತ್ತರಿಸಿದನು. ಸರ್ವಾಂಗಹೋಮಗಳ ಯಜ್ಞವೇದಿಕೆಯ ಮೇಲೆ ಬೆಂಕಿಯು ಇಳಿದುಬಂದಿತು.


ಬಾಳನ ಪ್ರವಾದಿಗಳಾದ ನೀವು ನಿಮ್ಮ ದೇವರನ್ನು ಪ್ರಾರ್ಥಿಸಿ. ನಾನು ಯೆಹೋವನನ್ನು ಪ್ರಾರ್ಥಿಸುತ್ತೇನೆ. ನಮ್ಮಲ್ಲಿ ಯಾರ ಪ್ರಾರ್ಥನೆಗೆ ಉತ್ತರವಾಗಿ ದೇವರು ಸೌದೆಯನ್ನು ಉರಿಯುವಂತೆ ಮಾಡುತ್ತಾನೋ ಆತನೇ ನಿಜವಾದ ದೇವರು” ಎಂದು ಹೇಳಿದನು. ಜನರೆಲ್ಲರೂ ಇದು ಒಳ್ಳೆಯ ಆಲೋಚನೆಯೆಂದು ಒಪ್ಪಿಕೊಂಡರು.


ಆ ಬಳಿಕ ನನ್ನನ್ನು ಉತ್ತರದ ದ್ವಾರದ ಮೂಲಕ ಆಲಯದ ಮುಂಭಾಗಕ್ಕೆ ಅವನು ಕರೆದುಕೊಂಡು ಹೋದನು. ನಾನು ನೋಡಿದಾಗ ಯೆಹೋವನ ತೇಜಸ್ಸು ಆತನ ಆಲಯವನ್ನು ತುಂಬುತ್ತಿತ್ತು. ನಾನು ಸಾಷ್ಟಾಂಗವೆರಗಿದೆನು.


ಆಗ ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಪ್ರಾಕಾರಕ್ಕೆ ತಂದಿತು. ಯೆಹೋವನ ಮಹಿಮೆಯು ಆಲಯವನ್ನು ತುಂಬಿತು.


ಸೂರ್ಯನು ಮುಳುಗಿದ ಮೇಲೆ ತುಂಬ ಕತ್ತಲಾಯಿತು. ಕಡಿದುಹಾಕಿದ್ದ ಪ್ರತಿಯೊಂದು ಪ್ರಾಣಿಗಳ ದೇಹದ ಎರಡೆರಡು ಹೋಳುಗಳು ಇನ್ನೂ ನೆಲದ ಮೇಲೆ ಇದ್ದವು. ಆ ಸಮಯದಲ್ಲಿ ಇದ್ದಕ್ಕಿದ್ದಂತೆ ಹೊಗೆ ಮತ್ತು ಬೆಂಕಿಗಳಿಂದ ಕೂಡಿದ ದೀವಿಟಿಗೆಯು ಈ ತುಂಡುಗಳ ನಡುವೆ ಹಾದುಹೋಯಿತು.


ಯೆಹೋವನ ದೂತನ ಕೈಯಲ್ಲಿ ಒಂದು ಕೋಲಿತ್ತು. ಯೆಹೋವನ ದೂತನು ತನ್ನ ಕೋಲಿನ ತುದಿಯಿಂದ ಮಾಂಸವನ್ನು ಮತ್ತು ರೊಟ್ಟಿಯನ್ನು ಮುಟ್ಟಿದನು. ಆಗ ಆ ಕಲ್ಲಿನಿಂದ ಬೆಂಕಿಯ ಜ್ವಾಲೆಯು ಎದ್ದಿತು! ಮಾಂಸ ಮತ್ತು ರೊಟ್ಟಿ ಸಂಪೂರ್ಣವಾಗಿ ಸುಟ್ಟುಹೋದವು! ಆಮೇಲೆ ಯೆಹೋವನ ದೂತನು ಅದೃಶ್ಯನಾದನು.


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.


ನಾನು ಪ್ರಾರ್ಥನೆಯಲ್ಲಿ ನನ್ನ ಪಾಪಗಳ ಬಗ್ಗೆ ಮತ್ತು ಇಸ್ರೇಲರ ಪಾಪಗಳ ಬಗ್ಗೆ ಹೇಳಿಕೊಂಡೆ. ನಾನು ನನ್ನ ದೇವರಾದ ಯೆಹೋವನ ಪವಿತ್ರ ಪರ್ವತಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೆ.


ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.


ಆ ಸ್ಥಳದಲ್ಲಿ ನಾನು ಇಸ್ರೇಲರನ್ನು ಸಂಧಿಸುವೆನು. ನನ್ನ ಪ್ರಭಾವದಿಂದ ಆ ಸ್ಥಳವು ಪವಿತ್ರವಾಗುವುದು.


ಸೀನಾಯಿ ಬೆಟ್ಟವು ಹೊಗೆಯಿಂದ ಕವಿದುಕೊಂಡಿತು. ಕುಲುಮೆಯಿಂದ ಬರುವ ಹೊಗೆಯಂತೆ, ಬೆಟ್ಟದಿಂದ ಹೊಗೆಯು ಮೇಲಕ್ಕೇರಿತು. ಯೆಹೋವನು ಬೆಂಕಿಯಲ್ಲಿ ಬೆಟ್ಟದ ಮೇಲೆ ಇಳಿದು ಬಂದದ್ದರಿಂದ ಇದು ಸಂಭವಿಸಿತು. ಇಡೀ ಬೆಟ್ಟ ನಡುಗಲಾರಂಭಿಸಿತು.


ಜೆರುಸಲೇಮಿನಿಂದಲೂ ಯೆಹೂದದಿಂದಲೂ ಯೆಹೋವನು ಕಾಣಿಕೆಗಳನ್ನು ಸ್ವೀಕರಿಸುವನು. ಹಿಂದಿನ ಕಾಲದಲ್ಲಿದ್ದಂತೆಯೇ ಈಗಲೂ ಆಗುವದು. ಬಹಳ ವರ್ಷಗಳ ಹಿಂದಿನ ಕಥೆಯೇ ಈಗಲೂ ಆಗುವದು.


ಸೊಲೊಮೋನನು ಯೆಹೋವನ ಆಲಯವನ್ನು ಮತ್ತು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು. ಸೊಲೊಮೋನನು ತಾನು ಕಟ್ಟಬೇಕೆಂದು ಅಪೇಕ್ಷಿಸಿದ ಎಲ್ಲವನ್ನು ಕಟ್ಟಿ ಮುಗಿಸಿದನು.


ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ ನನಗೆ ಎಷ್ಟೋ ಪ್ರಿಯವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು