Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:10 - ಪರಿಶುದ್ದ ಬೈಬಲ್‌

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಂದು ಸೊಲೊಮೋನನು ನೆರೆದು ಬಂದಿದ್ದ ಜನರನ್ನು ಅವರ ಮನೆಗಳಿಗೆ ಕಳುಹಿಸಿದನು. ದೇವರಾದ ಯೆಹೋವನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಮತ್ತು ಎಲ್ಲಾ ಇಸ್ರೇಲರಿಗೂ ಕರುಣೆಯನ್ನು ತೋರಿಸಿದ್ದಕ್ಕಾಗಿ ಜನರೆಲ್ಲರೂ ಹರ್ಷಿಸುತ್ತಾ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನ ಅರಸನು ಜನರಿಗೆ ಅಪ್ಪಣೆಕೊಟ್ಟನು; ಅವರು ದಾವೀದ - ಸೊಲೊಮೋನರಿಗೂ ಪ್ರಜೆಗಳಾದ ಇಸ್ರಯೇಲರಿಗೂ ಸರ್ವೇಶ್ವರ ಮಾಡಿದ ಉಪಕಾರಗಳನ್ನು ನೆನಸಿಕೊಂಡು, ಆನಂದಭರಿತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಲ್ಲಿ ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ ಸೊಲೊಮೋನರಿಗೂ ಆತನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಉಂಟಾದ ಉಪಕಾರಗಳನ್ನು ನೆನಸಿಕೊಂಡು ಆನಂದಭರಿತರಾಗಿ ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿವಸದಲ್ಲಿ ಅವನು ಜನರಿಗೆ ಅವರವರ ಡೇರೆಗಳಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಯೆಹೋವ ದೇವರು ದಾವೀದನಿಗೂ, ಸೊಲೊಮೋನನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:10
22 ತಿಳಿವುಗಳ ಹೋಲಿಕೆ  

ಮಾರನೆಯ ದಿನ ಸೊಲೊಮೋನನು ಜನರಿಗೆ ಮನೆಗೆ ಹೋಗುವಂತೆ ಹೇಳಿದನು. ಜನರೆಲ್ಲರು ರಾಜನನ್ನು ಅಭಿನಂದಿಸಿ ತಮ್ಮ ತಮ್ಮ ಮನೆಗಳಿಗೆ ಹೋದರು. ಯೆಹೋವನು ತನ್ನ ಸೇವಕನಾದ ದಾವೀದನಿಗೆ ಮತ್ತು ಇಸ್ರೇಲಿನ ಜನರಿಗೆ ಒಳ್ಳೆಯವುಗಳನ್ನು ಮಾಡಿದ್ದರಿಂದ ಅವರು ಸಂತೋಷವಾಗಿದ್ದರು.


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟಮಾಡಿಸಿದನು. ಆ ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.


ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.


ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ. ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು. ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.


ಆತನ ಪವಿತ್ರ ನಾಮದಲ್ಲಿ ಹೆಮ್ಮೆಪಡಿರಿ. ಯೆಹೋವನ ಆರಾಧಕರೇ, ಸಂತೋಷಪಡಿರಿ.


ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ!


ಯೆಹೋವನೇ, ನಿನ್ನ ಕಾರ್ಯಗಳಿಂದ ನಮ್ಮನ್ನು ನಿಜವಾಗಿಯೂ ಸಂತೋಷಗೊಳಿಸಿರುವೆ. ಅವುಗಳ ಕುರಿತು ನಾವು ಹರ್ಷದಿಂದ ಹಾಡುವೆವು.


ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ. ಶುದ್ಧಹೃದಯವುಳ್ಳವರೇ, ಉಲ್ಲಾಸಿಸಿರಿ.


“ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.


ಜೆರುಸಲೇಮಿನಲ್ಲಿ ಸಂತಸವು ತುಂಬಿತ್ತು. ಸೊಲೊಮೋನ್ ಅರಸನ ಸಮಯದಿಂದ ಅಂದಿನ ತನಕ ಅಂಥಾ ಹಬ್ಬವು ಆಚರಿಸಲ್ಪಟ್ಟಿರಲಿಲ್ಲ.


ದೇವರು ಅವುಗಳನ್ನು ತನ್ನ ಜನರಿಗಾಗಿ ಸಿದ್ಧಪಡಿಸಿದ್ದಕ್ಕಾಗಿಯೂ ಅದನ್ನು ಅಲ್ಪಕಾಲಾವಧಿಯಲ್ಲಿ ಮಾಡಿದ್ದಕ್ಕಾಗಿಯೂ ಹಿಜ್ಕೀಯನು ಮತ್ತು ಯೆಹೂದದ ಜನರು ಸಂತೋಷಪಟ್ಟರು.


“ದೇವರಾದ ಯೆಹೋವನೇ, ಎದ್ದು ನಿನ್ನ ಸಾಮರ್ಥ್ಯವನ್ನು ತೋರಿಸುವ ಒಡಂಬಡಿಕೆಯ ಪೆಟ್ಟಿಗೆಯೊಡನೆ ನಿನ್ನ ವಾಸಸ್ಥಳಕ್ಕೆ ಬಾ. ನಿನ್ನ ಯಾಜಕರು ರಕ್ಷಣಾವಸ್ತ್ರವನ್ನು ಧರಿಸಿಕೊಂಡಿರಲಿ; ನಿನ್ನನ್ನು ಪ್ರೀತಿಸುವವರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.


ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.


ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.


ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.


ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.


ಮೋಶೆಯ ಮಾವನಾದ ಇತ್ರೋನನು ಮಿದ್ಯಾನಿನಲ್ಲಿ ಯಾಜಕನಾಗಿದ್ದನು. ಮೋಶೆಗೆ ಮತ್ತು ಇಸ್ರೇಲರಿಗೆ ದೇವರು ಅನೇಕ ರೀತಿಗಳಲ್ಲಿ ಸಹಾಯ ಮಾಡಿದ್ದರ ಬಗ್ಗೆ, ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ನಡಿಸಿದ್ದರ ಬಗ್ಗೆ ಇತ್ರೋನನು ಕೇಳಿದನು.


ಏಳು ದಿನ ಹಬ್ಬದ ಆಚರಣೆಯ ಬಳಿಕ ಎಂಟನೆಯ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿದರು. ಅವರು ಯಜ್ಞವೇದಿಕೆಯನ್ನು ಯೆಹೋವನ ಆರಾಧನೆಗೋಸ್ಕರ ಪ್ರತಿಷ್ಠಿಸಿದರು. ಹಬ್ಬವನ್ನು ಏಳು ದಿನಗಳ ತನಕ ಆಚರಿಸಿದರು.


ಸೊಲೊಮೋನನು ತಾನು ಯೋಜಿಸಿದ ರೀತಿಯಲ್ಲಿ ದೇವಾಲಯವನ್ನೂ ಅರಮನೆಯನ್ನೂ ಕಟ್ಟಿ ಮುಗಿಸಿದನು.


ಪರ್ಣಶಾಲೆಗಳ ಹಬ್ಬದ ಏಳು ದಿವಸಗಳಲ್ಲೂ ರಾಜನು ಹಾಗೆಯೇ ಮಾಡಬೇಕು. ಈ ಹಬ್ಬವು ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪ್ರಾರಂಭವಾಗುವದು. ಈ ಕಾಣಿಕೆಯು ಸರ್ವಾಂಗಹೋಮ, ಪಾಪಪರಿಹಾರಕಯಜ್ಞ, ಧಾನ್ಯಸಮರ್ಪಣೆ ಮತ್ತು ಎಣ್ಣೆಯ ಸಮರ್ಪಣೆಗಳಿಗಾಗಿ ಅವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು