Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:15 - ಪರಿಶುದ್ದ ಬೈಬಲ್‌

15 ನಿಮ್ಮನ್ನು ದೃಷ್ಟಿಸಿ ನಿಮ್ಮ ಪ್ರಾರ್ಥನೆಗಳಿಗೆ ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗೆ ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗೆ ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವುವು, ನನ್ನ ಕಿವಿಗಳು ಆಲೈಸುತ್ತಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:15
9 ತಿಳಿವುಗಳ ಹೋಲಿಕೆ  

ನೀತಿವಂತರನ್ನು ಪ್ರಭುವು ಕಾಯುತ್ತಾನೆ; ಅವರ ಪ್ರಾರ್ಥನೆಗಳನ್ನು ಆಲಿಸುತ್ತಾನೆ. ಆದರೆ ಕೆಟ್ಟದ್ದನ್ನು ಮಾಡುವ ಜನರನ್ನು ಪ್ರಭುವು ವಿರೋಧಿಸುತ್ತಾನೆ.”


ನನ್ನ ದೇವರೇ, ಈ ಸ್ಥಳದಲ್ಲಿ ಪ್ರಾರ್ಥಿಸುವ ನಮ್ಮನ್ನು ವೀಕ್ಷಿಸಿ ನಮ್ಮ ಪ್ರಾರ್ಥನೆಗೆ ಕಿವಿಗೊಡು.


ನಿನ್ನ ಕಣ್ಣುಗಳು ಹಗಲಿರುಳು ಈ ಆಲಯವನ್ನು ದೃಷ್ಟಿಸುತ್ತಲೇ ಇರಲಿ. ನೀನು ನಿನ್ನ ನಾಮವನ್ನು ಇಲ್ಲಿ ಸ್ಥಾಪಿಸುತ್ತೇನೆ ಎಂದು ಹೇಳಿರುವೆ. ನಾನು ಈ ದೇವಾಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವಾಗ ಆಲೈಸು.


“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.


ನನ್ನ ಒಡೆಯನೇ, ನನಗೆ ಕಿವಿಗೊಡು. ನನ್ನ ಮೊರೆಯನ್ನು ಆಲಿಸು.


ಪ್ರಾರ್ಥನೆಯನ್ನು ಕೇಳುವಾತನೇ, ಜನರೆಲ್ಲರೂ ನಿನ್ನ ಬಳಿಗೆ ಬರುವರು.


ನಿಮ್ಮ ದೇವರಾದ ಯೆಹೋವನು ಆ ಭೂಮಿಯನ್ನು ಕಾಯುತ್ತಾನೆ. ಆ ದೇಶವನ್ನು ವರ್ಷದ ಪ್ರಾರಂಭದಿಂದ ಕೊನೆಯ ತನಕ ಪರಿಪಾಲಿಸುತ್ತಾನೆ.


‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದ್ದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು.


ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ಅವಮಾನಮಾಡಿ ಬರೆದ ಪತ್ರವನ್ನು ಕೇಳಿಸಿಕೊ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು