2 ಪೂರ್ವಕಾಲ ವೃತ್ತಾಂತ 7:18 - ಪರಿಶುದ್ದ ಬೈಬಲ್18 ನಾನು ನಿನ್ನನ್ನು ಬಲಿಷ್ಠನಾದ ಅರಸನನ್ನಾಗಿ ಮಾಡುವೆನು. ನಿನ್ನ ರಾಜ್ಯವು ಮಹಾರಾಜ್ಯವಾಗುವದು. ನಿನ್ನ ತಂದೆಯಾದ ದಾವೀದನಿಗೆ, ‘ದಾವೀದನೇ, ನಿನ್ನ ಕುಟುಂಬದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ರಾಜನಾಗಿರುವನು’ ಎಂದು ನಾನು ವಾಗ್ದಾನ ಮಾಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಾಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ‘ಇಸ್ರಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ರಾಜ್ಯಾಧಿಕಾರ ನಡೆಸುವರು’ ಎಂಬುದಾಗಿ ನಿನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಮತ್ತು ಇಸ್ರಾಯೇಲ್ಯರಲ್ಲಿ ನಿನ್ನ ಸಂತಾನದವರು ತಪ್ಪದೆ ರಾಜ್ಯಾಧಿಕಾರ ನಡಿಸುವರು ಎಂಬದಾಗಿ ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ‘ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲ,’ ಎಂದು ನಾನು ನಿನ್ನ ತಂದೆ ದಾವೀದನ ಸಂಗಡ ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ. ಅಧ್ಯಾಯವನ್ನು ನೋಡಿ |