2 ಪೂರ್ವಕಾಲ ವೃತ್ತಾಂತ 7:20 - ಪರಿಶುದ್ದ ಬೈಬಲ್20 ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ಈ ದೇವಾಲಯವನ್ನು ತೊರೆದುಬಿಡುವೆನು. ಈ ದೇವಾಲಯದ ಬಗ್ಗೆ ಲೋಕದ ಜನರು ಗೇಲಿಮಾಡುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ಇಸ್ರಯೇಲರಿಗೆ ಕೊಟ್ಟ ನನ್ನ ನಾಡಿನಿಂದ ನಿಮ್ಮನ್ನು ಕಿತ್ತುಹಾಕುವೆನು; ನನ್ನ ಹೆಸರಿಗೆ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಡುವೆನು; ಎಲ್ಲ ಜನಾಂಗಗಳವರು ಪರಿಹಾಸ್ಯದಿಂದ ಲಾವಣಿ ಕಟ್ಟುವುದಕ್ಕೂ ನಿಂದಿಸುವುದಕ್ಕೂ ಇದು ಆಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವುಗಳಿಗೆ ಕೈಮುಗಿಯುವದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಕಿತ್ತುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಟ್ಟು ಎಲ್ಲಾ ಜನಾಂಗಗಳವರು ಗಾದೆಗಳನ್ನು ಕಲ್ಪಿಸುವದಕ್ಕೂ ನಿಂದಿಸುವದಕ್ಕೂ ಅದು ಆಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.
ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.
ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.