Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:3 - ಪರಿಶುದ್ದ ಬೈಬಲ್‌

3 ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:3
26 ತಿಳಿವುಗಳ ಹೋಲಿಕೆ  

ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.


ಯೆಹೋಷಾಫಾಟನು ಜನರ ಸಲಹೆಗಳನ್ನು ಕೇಳಿದನು; ಯೆಹೋವನನ್ನು ಸ್ತುತಿಸಲು ಗಾಯಕರನ್ನು ಆರಿಸಿದನು; ಯಾಕೆಂದರೆ ಆತನು ಪರಿಶುದ್ಧನು ಮತ್ತು ಅದ್ಭುತಸ್ವರೂಪನು. ಅವರು ಸೈನ್ಯದ ಮುಂದುಗಡೆಯಲ್ಲಿ ಹೋಗುತ್ತಾ ಆತನಿಗೆ ಸ್ತುತಿಗೀತೆಯನ್ನು ಹಾಡಿದರು. ಆ ಗಾಯಕರು, “ಯೆಹೋವನಿಗೆ ಸ್ತೋತ್ರಮಾಡಿರಿ. ಆತನ ಕರುಣೆಯು ನಿರಂತರವಾದದ್ದು” ಎಂದು ಹಾಡಿದರು.


ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.


ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪುಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.


ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಭಟಿಸಿದರು; ದೇವಾಲಯದ ಅಸ್ತಿವಾರ ಹಾಕಿದ್ದಕ್ಕೆ ಯೆಹೋವನನ್ನು ಸ್ತುತಿಸಿದರು.


ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು.


ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.


ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು.


ಹೇಮಾನ್ ಮತ್ತು ಯೆದುತೂನ್ ಅವರೊಂದಿಗಿದ್ದು ತುತ್ತೂರಿಯನ್ನೂದುತ್ತಾ ತಾಳ ಬಾರಿಸುತ್ತಾ ಇತರ ವಾದ್ಯಗಳನ್ನು ನುಡಿಸುತ್ತಾ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿದರು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿದ್ದರು.


ಈ ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.


ಆಗ ಮೋಶೆ ಆರೋನರು ಇಸ್ರೇಲರ ಸರ್ವ ಸಮೂಹದವರ ಮುಂದೆ ಬೋರಲಬಿದ್ದರು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಸದಾಕಾಲಕ್ಕೂ ಇರುವದು.


ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.


ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು! ಆತನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿಯು ಶಾಶ್ವತವಾದದ್ದು!


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು! ಆತನ ಪ್ರೀತಿ ಶಾಶ್ವತವಾದದ್ದು!


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು!


ಯೆಹೋಷಾಫಾಟನು ನೆಲದ ಮೇಲೆ ಸಾಷ್ಟಾಂಗನಮಸ್ಕಾರ ಮಾಡಿದನು. ಹಾಗೆಯೇ, ನೆರೆದಿದ್ದ ಜನರೆಲ್ಲರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.


ಸೇರಿ ಬಂದಿದ್ದ ಜನಸಮೂಹದವರು ಸಾಷ್ಟಾಂಗನಮಸ್ಕಾರ ಮಾಡಿದರು. ಯಜ್ಞವು ಮುಗಿಯುವ ತನಕ ದೇವರ ಸ್ತೋತ್ರಗಾನ ಮುಂದುವರಿಯಿತು.


ಯಜ್ಞಸಮರ್ಪಣೆ ಮುಗಿದ ಬಳಿಕ ಅರಸನಾದ ಹಿಜ್ಕೀಯನೂ ಪ್ರಜೆಗಳೂ ಯೆಹೋವನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.


ರಾಜನಾದ ಹಿಜ್ಕೀಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು