2 ಪೂರ್ವಕಾಲ ವೃತ್ತಾಂತ 7:5 - ಪರಿಶುದ್ದ ಬೈಬಲ್5 ಸೊಲೊಮೋನ ಅರಸನು ಇಪ್ಪತ್ತೆರಡು ಸಾವಿರ ಹೋರಿಗಳನ್ನೂ ಒಂದು ಲಕ್ಷ ಇಪ್ಪತ್ತು ಸಾವಿರ ಕುರಿಗಳನ್ನೂ ಯಜ್ಞವಾಗಿ ಸಮರ್ಪಿಸಿದನು. ಅರಸನೂ ಎಲ್ಲಾ ಜನರೂ ದೇವಾಲಯವನ್ನು ಆರಾಧನೆಗಾಗಿ ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅರಸ ಸೊಲೊಮೋನನು ಬಲಿಯಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ದೇವಾಲಯವನ್ನು ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ದೇವಾಲಯವನ್ನು ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅರಸನಾದ ಸೊಲೊಮೋನನು 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಬಲಿಯಾಗಿ ಅರ್ಪಿಸಿದನು. ಹೀಗೆಯೇ ಅರಸನೂ, ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು. ಅಧ್ಯಾಯವನ್ನು ನೋಡಿ |
ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”
ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.
ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.