Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:6 - ಪರಿಶುದ್ದ ಬೈಬಲ್‌

6 ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಸರ್ವೇಶ್ವರನ ಗಾಯನಸೇವೆಗಾಗಿ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿ ಇದ್ದವು. ಇವರು ರಾಜಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡೆಸುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಯನ್ನು ಸಮರ್ಪಿಸಿರಿ; ಅವರ ಅಚಲಪ್ರೀತಿ ಶಾಶ್ವತ” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಯೇಲರೆಲ್ಲರೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಯೆಹೋವನ ಗಾಯನಸೇವೆಗೋಸ್ಕರ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿದ್ದವು. ಇವರು ರಾಜ ಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡಿಸುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಮರ್ಪಿಸಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂಬದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಾಯೇಲ್ಯರೆಲ್ಲರೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:6
26 ತಿಳಿವುಗಳ ಹೋಲಿಕೆ  

ಯಜ್ಞವೇದಿಕೆಯ ಪೂರ್ವ ಭಾಗದಲ್ಲಿ ಲೇವಿಯರ ಗಾಯಕರು ನಿಂತರು. ಆಸಾಫನ, ಹೇಮಾನನ ಮತ್ತು ಯೆದುತೂನನ ಗಾಯಕ ವೃಂದದವರೆಲ್ಲರೂ ಅಲ್ಲಿ ಇದ್ದರು. ಅವರ ಗಂಡುಮಕ್ಕಳೂ ಕುಟುಂಬದವರೂ ಅಲ್ಲಿದ್ದರು. ಗಾಯಕರೆಲ್ಲರೂ ಬಿಳೀ ನಾರುಮಡಿಯ ಬಟ್ಟೆಗಳನ್ನು ಉಟ್ಟಿದ್ದರು. ತಾಳ, ತಂತಿವಾದ್ಯಗಳನ್ನು ಹಿಡಿದುಕೊಂಡಿದ್ದರು. ಗಾಯಕರೊಂದಿಗೆ ನೂರಿಪ್ಪತ್ತು ಮಂದಿ ಯಾಜಕರು ತುತ್ತೂರಿಯನ್ನೂದಿದರು.


ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.


ನಿಮ್ಮ ತಂತಿವಾದ್ಯಗಳಿಂದ ಹಾಡನ್ನು ಬಾರಿಸುವಿರಿ; ದಾವೀದನಂತೆ ನಿಮ್ಮ ವಾದ್ಯಗಳನ್ನು ಅಭ್ಯಾಸಿಸುವಿರಿ.


ಯೆಹೋವನು ಹೇಳುವುದೇನೆಂದರೆ, “ಜನರು ನನ್ನನ್ನು ತಿಳಿದುಕೊಳ್ಳಲೆಂದು ಹೀಗಾಯಿತು. ನಾನು ಯಾರೆಂದು ನನ್ನ ಜನರಿಗೆ ಗೊತ್ತಾಗುವದು. ನನ್ನ ಜನರಿಗೆ ನನ್ನ ಹೆಸರಿನ ಪರಿಚಯವಾಗುವದು. ‘ನಾನೇ’ ಎಂಬಾತನಾದ ನಾನೇ ಅವರ ಸಂಗಡ ಮಾತನಾಡುತ್ತಿದ್ದೇನೆ ಎಂದು ಅವರಿಗೆ ಗೊತ್ತಾಗುವದು.”


ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು! ಆತನ ಪ್ರೀತಿ ಶಾಶ್ವತವಾದದ್ದು!


ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು! ಆತನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿಯು ಶಾಶ್ವತವಾದದ್ದು!


ದೇವರ ಮಕ್ಕಳು ಹಬ್ಬಗಳನ್ನು ಆಚರಿಸಲು ಜೆರುಸಲೇಮಿಗೆ ಹೋಗುವರು. ಅವರು ಸಂತೋಷದಿಂದ ಹಾಡುತ್ತಾ ಕುಣಿದಾಡುವರು. “ಒಳ್ಳೆಯವುಗಳೆಲ್ಲ ಬರುವುದು ಜೆರುಸಲೇಮಿನಿಂದಲೇ” ಎಂದು ಅವರು ಹೇಳುವರು.


ದಾವೀದನೂ ಅರಸನ ದರ್ಶಿಯಾಗಿದ್ದ ಗಾದನೂ ಮತ್ತು ಪ್ರವಾದಿಯಾಗಿದ್ದ ನಾತಾನನೂ ಆಜ್ಞಾಪಿಸಿದಂತೆ, ಅರಸನಾದ ಹಿಜ್ಕೀಯನು ಲೇವಿಯರನ್ನು ತಾಳ, ತಂತಿವಾದ್ಯ ಮತ್ತು ಕಿನ್ನರಿಗಳೊಂದಿಗೆ ದೇವಾಲಯದಲ್ಲಿ ಇರಿಸಿದನು. ಈ ಆಜ್ಞೆಯು ಯೆಹೋವನಿಂದ ಪ್ರವಾದಿಗಳ ಮೂಲಕ ಬಂದಿತ್ತು.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಸದಾಕಾಲಕ್ಕೂ ಇರುವದು.


ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಇವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವಾಗ ತುತ್ತೂರಿ ಊದುವ ಕೆಲಸವನ್ನು ಕೊಟ್ಟನು. ಓಬೇದೆದೋಮ್ ಮತ್ತು ಯೆಹೀಯ ಒಡಂಬಡಿಕೆಯ ಪೆಟ್ಟಿಗೆಗೆ ಕಾವಲುಗಾರರಾದರು.


ದಾವೀದನೂ ಎಲ್ಲಾ ಇಸ್ರೇಲರೂ ದೇವರ ಮುಂದೆ ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಹೋದರು. ಹಾರ್ಪ್‌ವಾದ್ಯವನ್ನು, ಲೈರ್‌ವಾದ್ಯವನ್ನು, ತಬಲವನ್ನು, ತಾಳವನ್ನು ಮತ್ತು ತುತ್ತೂರಿಯನ್ನು ಬಾರಿಸುತ್ತಾ ಹಾಡುತ್ತಾ ದೇವರಿಗೆ ಸ್ತೋತ್ರ ಮಾಡಿದರು.


ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು.


ಸೊಲೊಮೋನ ಅರಸನು ಇಪ್ಪತ್ತೆರಡು ಸಾವಿರ ಹೋರಿಗಳನ್ನೂ ಒಂದು ಲಕ್ಷ ಇಪ್ಪತ್ತು ಸಾವಿರ ಕುರಿಗಳನ್ನೂ ಯಜ್ಞವಾಗಿ ಸಮರ್ಪಿಸಿದನು. ಅರಸನೂ ಎಲ್ಲಾ ಜನರೂ ದೇವಾಲಯವನ್ನು ಆರಾಧನೆಗಾಗಿ ಪ್ರತಿಷ್ಠಿಸಿದರು.


ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.


ಆ ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷದಿಂದ ತಮ್ಮ ಕೆಲಸವನ್ನು ಮಾಡಿದರು.


ಆ ಬಳಿಕ ಹಿಜ್ಕೀಯನು ಸರ್ವಾಂಗಹೋಮವನ್ನು ಅರ್ಪಿಸಲು ಆಜ್ಞಾಪಿಸಿದನು. ಸರ್ವಾಂಗಹೋಮ ಆರಂಭವಾದ ಕೂಡಲೇ ದೇವರಿಗೆ ಸ್ತೋತ್ರಗಾನ ಹಾಡುವದೂ ಪ್ರಾರಂಭವಾಯಿತು. ತುತ್ತೂರಿಯನ್ನು ಊದಿ ದಾವೀದನ ವಾದ್ಯಗಳನ್ನು ಬಾರಿಸಿದರು.


ಅನಂತರ ಯಾಜಕರನ್ನು ಮತ್ತು ಲೇವಿಯರನ್ನು ಅವರವರ ವರ್ಗಗಳಿಗನುಸಾರವಾಗಿ, ಮೋಶೆಯ ವಿಧಿಯಂತೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಆರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು