2 ಪೂರ್ವಕಾಲ ವೃತ್ತಾಂತ 7:8 - ಪರಿಶುದ್ದ ಬೈಬಲ್8 ಸೊಲೊಮೋನನೂ ಎಲ್ಲಾ ಇಸ್ರೇಲರೂ ಏಳು ದಿನಗಳ ತನಕ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಸೊಲೊಮೋನನೊಂದಿಗೆ ಬಹುದೊಡ್ಡ ಇಸ್ರೇಲರ ಸಮೂಹವು ನೆರೆದು ಬಂದಿತ್ತು. ಹಮಾತಿನಿಂದ ಹಿಡಿದು ಈಜಿಪ್ಟಿನ ನದಿಯ ತನಕ ವಾಸಿಸುವವರೆಲ್ಲರೂ ಜೆರುಸಲೇಮಿಗೆ ಬಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ, ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಅಲ್ಲಿ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆ ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈ ಪ್ರಕಾರ ಸೊಲೊಮೋನನು ಮತ್ತು ಹಮಾತಿನ ದಾರಿಯಿಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಇಸ್ರಯೇಲರೆಲ್ಲರು ಅದೇ ಸಮಯದಲ್ಲಿ ಏಳು ದಿನಗಳವರೆಗೂ ಜಾತ್ರೆ ನಡೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಅದೇ ಕಾಲದಲ್ಲಿ ಏಳು ದಿನಗಳವರೆಗೂ [ಪರ್ಣಶಾಲೆಗಳ] ಜಾತ್ರೆ ನಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ಅವನ ಸಂಗಡ ಏಳು ದಿವಸ ಹಬ್ಬವನ್ನು ಮಾಡಿದರು. ಅಧ್ಯಾಯವನ್ನು ನೋಡಿ |
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!