Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:9 - ಪರಿಶುದ್ದ ಬೈಬಲ್‌

9 ಏಳು ದಿನ ಹಬ್ಬದ ಆಚರಣೆಯ ಬಳಿಕ ಎಂಟನೆಯ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿದರು. ಅವರು ಯಜ್ಞವೇದಿಕೆಯನ್ನು ಯೆಹೋವನ ಆರಾಧನೆಗೋಸ್ಕರ ಪ್ರತಿಷ್ಠಿಸಿದರು. ಹಬ್ಬವನ್ನು ಏಳು ದಿನಗಳ ತನಕ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತರುವಾಯ ಎಂಟನೆಯ ದಿನದಲ್ಲಿ ಸಭೆಸೇರಿದರು. ಹೀಗೆ ಏಳು ದಿವಸ ಬಲಿಪೀಠ ಪ್ರತಿಷ್ಠೆಯನ್ನೂ ಇನ್ನು ಏಳು ದಿವಸ ಜಾತ್ರೆಯನ್ನೂ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತರುವಾಯ ಎಂಟನೆಯ ದಿನದಲ್ಲಿ ಸಭೆ ನೆರೆಯಿತು. ಹೀಗೆ ಏಳು ದಿವಸ ಯಜ್ಞವೇದಿ ಪ್ರತಿಷ್ಠೆಯನ್ನೂ ಇನ್ನು ಏಳು ದಿವಸ ಜಾತ್ರೆಯನ್ನೂ ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎಂಟನೆಯ ದಿನದಲ್ಲಿ ಪರಿಶುದ್ಧ ಸಮೂಹವನ್ನು ನಡೆಸಿದರು. ಏಕೆಂದರೆ ಏಳು ದಿವಸ ಬಲಿಪೀಠದ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿವಸ ಹಬ್ಬವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:9
10 ತಿಳಿವುಗಳ ಹೋಲಿಕೆ  

ನೀವು ಏಳು ದಿನಗಳವರೆಗೆ ಅಗ್ನಿಯ ಮೂಲಕ ಯೆಹೋವನಿಗೆ ಯಜ್ಞವನ್ನು ಅರ್ಪಿಸಬೇಕು. ಎಂಟನೆಯ ದಿನದಲ್ಲಿ ಇನ್ನೊಂದು ಬಾರಿ ಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯಜ್ಞವನ್ನು ಅರ್ಪಿಸಬೇಕು. ಇದು ಪವಿತ್ರಸಭೆಯಾಗಿರುವುದು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು.


ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.


ಆ ಹಬ್ಬದ ದಿನಗಳ ಪ್ರತಿಯೊಂದು ದಿನದಲ್ಲಿ ಎಜ್ರನು ಧರ್ಮಶಾಸ್ತ್ರ ಪಾರಾಯಣ ಮಾಡಿದನು. ಮೊದಲನೆ ದಿನದಿಂದ ಪ್ರಾರಂಭಿಸಿ ಕಡೆಯ ದಿನದ ತನಕ ಇಸ್ರೇಲರೆಲ್ಲರೂ ಈ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು. ಎಂಟನೆಯ ದಿನದಲ್ಲಿ ಧರ್ಮಶಾಸ್ತ್ರದ ಪ್ರಕಾರ ವಿಶೇಷಕೂಟಗಳಿಗಾಗಿ ಜನರು ಒಟ್ಟಾಗಿ ಸೇರಿಬಂದರು.


ಬಂದವರೆಲ್ಲರೂ ಇನ್ನೂ ಏಳು ದಿವಸ ಅಲ್ಲಿಯೇ ಇರಲು ಒಪ್ಪಿಕೊಂಡರು. ಇನ್ನೂ ಏಳು ದಿವಸ ಪಸ್ಕಹಬ್ಬ ಆಚರಿಸಲು ಅವರು ಸಂತೋಷಪಟ್ಟರು.


ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!


ಆರು ದಿನಗಳ ತನಕ ನೀವು ಹುಳಿ ಇಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ನೀವು ಏನೂ ಕೆಲಸ ಮಾಡದೆ ಇರಬೇಕು. ಆ ದಿನ ಒಟ್ಟಾಗಿ ಸೇರಿ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಬೇಕು.


ವೇದಿಕೆಯು ಅಭಿಷೇಕಿಸಲ್ಪಟ್ಟಾಗ, ಯಜ್ಞವೇದಿಕೆಯ ಆರಂಭಕ್ಕಾಗಿ ಪ್ರಧಾನರು ಸಹ ತಮ್ಮ ಕಾಣಿಕೆಗಳನ್ನು ವೇದಿಕೆಯ ಮುಂದೆ ತಂದರು.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಂದು ಸೊಲೊಮೋನನು ನೆರೆದು ಬಂದಿದ್ದ ಜನರನ್ನು ಅವರ ಮನೆಗಳಿಗೆ ಕಳುಹಿಸಿದನು. ದೇವರಾದ ಯೆಹೋವನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಮತ್ತು ಎಲ್ಲಾ ಇಸ್ರೇಲರಿಗೂ ಕರುಣೆಯನ್ನು ತೋರಿಸಿದ್ದಕ್ಕಾಗಿ ಜನರೆಲ್ಲರೂ ಹರ್ಷಿಸುತ್ತಾ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು.


ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.


ಆದ್ದರಿಂದ ಇಸ್ರೇಲಿನ ಜನರೆಲ್ಲರೂ ರಾಜನಾದ ಸೊಲೊಮೋನನ ಬಳಿಗೆ ಒಟ್ಟಾಗಿ ಬಂದರು. ಇದು ಏತನೀಮ್ ತಿಂಗಳಿನ (ಆಶ್ವೀಜ) ವಿಶೇಷ ದಿನದಂದು (ಪರ್ಣಶಾಲೆಗಳ ಹಬ್ಬ) ನಡೆಯಿತು. ಇದು ವರ್ಷದ ಏಳನೆಯ ತಿಂಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು