2 ಪೂರ್ವಕಾಲ ವೃತ್ತಾಂತ 8:13 - ಪರಿಶುದ್ದ ಬೈಬಲ್13 ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮೋಶೆಯ ಆಜ್ಞೆಯಂತೆ, ಸಬ್ಬತ್‍ದಿನ, ಅಮಾವಾಸ್ಯೆ, ಇವುಗಳಲ್ಲೂ ಹುಳಿರಹಿತ ರೊಟ್ಟಿಗಳ ಜಾತ್ರೆ, ಪಂಚಾಶತ್ತಮ ದಿನದ ಜಾತ್ರೆ, ಪರ್ಣಕುಟೀರಗಳ ಜಾತ್ರೆ ಎಂಬೀ ಮೂರು ವಾರ್ಷಿಕ ಜಾತ್ರೆಗಳಲ್ಲೂ ಆಯಾ ದಿವಸಗಳಿಗೆ ನೇಮಕವಾದ ದಹನಬಲಿಗಳನ್ನು ಸಮರ್ಪಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನ ಯಜ್ಞವೇದಿಯ ಮೇಲೆ ಮೋಶೆಯ ಆಜ್ಞೆಯಂತೆ ಸಬ್ಬತ್ ದಿವಸ, ಅಮಾವಾಸ್ಯೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆ, ಪಂಚಾಶತ್ತಮದಿನದ ಜಾತ್ರೆ, ಪರ್ಣಶಾಲೆಗಳ ಜಾತ್ರೆ ಎಂಬೀ ಮೂರು ವಾರ್ಷಿಕಜಾತ್ರೆಗಳಲ್ಲಿಯೂ ಆಯಾ ದಿವಸಗಳಿಗೆ ನೇಮಕವಾದ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದಿನಂಪ್ರತಿ ಮೋಶೆಯ ಆಜ್ಞೆಯ ಪ್ರಕಾರ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಯೂ ವರುಷಕ್ಕೆ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಗುಡಾರಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿ |
ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”