Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:14 - ಪರಿಶುದ್ದ ಬೈಬಲ್‌

14 ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:14
33 ತಿಳಿವುಗಳ ಹೋಲಿಕೆ  

ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಮತ್ತು ಅವರ ಕುಟುಂಬದವರು. ಶಲ್ಲೂಮನು ಅವರ ನಾಯಕನಾಗಿದ್ದನು.


ಅಲ್ಲಿ ಆಸಾಫನ ಸಹೋದರರಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ ಮತ್ತು ಹನಾನೀ ಇದ್ದರು. ದೇವಮನುಷ್ಯನಾದ ದಾವೀದನು ತಯಾರಿಸಿದ್ದ ವಾದ್ಯಗಳು ಅವರ ಬಳಿಯಲ್ಲಿದ್ದವು. ಎಜ್ರನು ಗೋಡೆಯನ್ನು ಪ್ರತಿಷ್ಠೆ ಮಾಡಲು ಒಂದು ತಂಡದ ಜನರನ್ನು ತನ್ನೊಂದಿಗೆ ಕರೆದುಕೊಂಡು ಹೋದನು.


ಲೇವಿಯರಲ್ಲಿ ಇವರು ಮುಖಂಡರು: ಹಷಬ್ಯ, ಶೇರೇಬ್ಯ, ಕದ್ಮೀಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು.


ಅನಂತರ ಯಾಜಕರನ್ನು ಮತ್ತು ಲೇವಿಯರನ್ನು ಅವರವರ ವರ್ಗಗಳಿಗನುಸಾರವಾಗಿ, ಮೋಶೆಯ ವಿಧಿಯಂತೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಆರಿಸಿದರು.


“ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!


ದೇವರು ಸೌಲನನ್ನು ತೆಗೆದುಹಾಕಿದ ಮೇಲೆ ದಾವೀದನನ್ನು ಅವರ ರಾಜನನ್ನಾಗಿ ಮಾಡಿದನು. ‘ಇಷಯನ ಮಗನಾದ ದಾವೀದನು ನನಗೆ ಮೆಚ್ಚಿಗೆಯಾದವನು. ಅವನು ನನ್ನ ಅಪೇಕ್ಷೆಗೆ ತಕ್ಕಂತೆ ಕಾರ್ಯಗಳನ್ನು ಮಾಡುತ್ತಾನೆ’ ಎಂದು ದೇವರು ದಾವೀದನ ಬಗ್ಗೆ ಹೇಳಿದ್ದಾನೆ.


ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು.


ಹೆರೋದನು ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್.


ಪಸ್ಕಹಬ್ಬದ ಆಚರಣೆಗಳಿಗೆ ಎಲ್ಲವೂ ಸಿದ್ಧವಾದಾಗ ಯಾಜಕರೂ ಲೇವಿಯರೂ ತಮ್ಮ ನೇಮಿತ ಸ್ಥಳಗಳಲ್ಲಿ ನಿಂತರು. ಇದು ಅರಸನ ಆಜ್ಞೆಯಾಗಿತ್ತು.


ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.


ಈಗ ನೀವು ಮಾಡಬೇಕಾದದ್ದೇನೆಂದರೆ: ಸಬ್ಬತ್ ದಿವಸದಲ್ಲಿ ದೇವಾಲಯಕ್ಕೆ ಬರತಕ್ಕ ಯಾಜಕರಲ್ಲೂ ಲೇವಿಯರಲ್ಲೂ ಮೂರರಲ್ಲೊಂದು ಭಾಗವು ದೇವಾಲಯದ ದ್ವಾರಗಳನ್ನು ಕಾಯಬೇಕು.


ಅಲ್ಲಿ ನೆರೆದುಬಂದಿದ್ದ ಯಾಜಕರೆಲ್ಲರೂ ಯಾವ ವರ್ಗವ್ಯತ್ಯಾಸವಿಲ್ಲದೆ ಆಚಾರಕ್ಕನುಸಾರವಾಗಿ ತಮ್ಮನ್ನು ಶುದ್ಧೀಕರಿಸಿಕೊಂಡರು. ಬಳಿಕ ಅವರು ಪವಿತ್ರ ಸ್ಥಳದಿಂದ ಹೊರಬಂದು ಒಟ್ಟಾಗಿ ನಿಂತುಕೊಂಡರು.


ಆಮೇಲೆ ದಾವೀದನು, “ನಕ್ಷೆಗಳನ್ನೆಲ್ಲ ಮಾಡಲು ಯೆಹೋವನೇ ನನ್ನನ್ನು ನಡಿಸಿ ಮಾರ್ಗದರ್ಶನ ಕೊಟ್ಟನು. ಈ ನಕ್ಷೆಗಳಲ್ಲಿರುವ ಸಕಲ ವಿಷಯಗಳನ್ನು ನಾನು ಅರಿತುಕೊಳ್ಳುವಂತೆ ಸಹಾಯ ಮಾಡಿದನು” ಎಂದು ಹೇಳಿದನು.


ದಾವೀದನು ಬಹಳ ಮುದುಕನಾದಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರೇಲರ ಅರಸನನ್ನಾಗಿ ಮಾಡಿದನು.


ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ.


ದೇವರ ಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು.


ಆಗ ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಪ್ರತಿನಿತ್ಯ ಸೇವೆಮಾಡಲು ಅಲ್ಲಿರಿಸಿದನು.


ಆರೋನನ ಸಂತಾನದವರು ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಗಂಡುಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.


ದಾವೀದನೂ ಸೇನಾಪತಿಗಳೂ ಆಸಾಫನ ಸಂತತಿಯವರನ್ನು ವಿಶೇಷವಾದ ಸೇವೆಗೆ ಪ್ರತ್ಯೇಕಿಸಿದರು. ಆಸಾಫನ ಗಂಡುಮಕ್ಕಳು ಹೇಮಾನ್ ಮತ್ತು ಯೆದುತೂನ್. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸುತ್ತಾ ದೇವರ ಸಂದೇಶವನ್ನು ಪ್ರವಾದಿಸುವುದೇ ಇವರ ಸೇವೆಯಾಗಿತ್ತು. ಈ ರೀತಿಯಾಗಿ ದೇವರ ಸೇವೆಯನ್ನು ಮಾಡಿದವರು ಯಾರೆಂದರೆ:


ಕೋರಹಿಯ ವಂಶದವರಲ್ಲಿ ದ್ವಾರಪಾಲಕರು ಯಾರೆಂದರೆ: ಮೆಷೆಲೆಮ್ಯ ಮತ್ತು ಅವನ ಗಂಡುಮಕ್ಕಳು. (ಮೆಷೆಲೆಮ್ಯನು ಕೋರಹಿಯನ ಮಗ. ಕೋರಹಿಯನು ಆಸಾಫನ ಕುಲದವನಾಗಿದ್ದನು.)


ಸೊಲೊಮೋನನು ಯಾಜಕರಿಗಾಗಲಿ ಲೇವಿಯರಿಗಾಗಲಿ ಕೊಟ್ಟ ಆಜ್ಞೆಗಳನ್ನು ಯಾರೂ ಬದಲಿಸಲಿಲ್ಲ; ಅವುಗಳಿಗೆ ಯಾರೂ ಅವಿಧೇಯರಾಗಲಿಲ್ಲ; ಬೆಲೆಬಾಳುವ ವಸ್ತುಗಳ ಸಂಗ್ರಹಣ ಕಾರ್ಯದಲ್ಲೂ ಅವರು ಜಾಗರೂಕರಾಗಿದ್ದರು.


ದಾವೀದನೂ ಅರಸನ ದರ್ಶಿಯಾಗಿದ್ದ ಗಾದನೂ ಮತ್ತು ಪ್ರವಾದಿಯಾಗಿದ್ದ ನಾತಾನನೂ ಆಜ್ಞಾಪಿಸಿದಂತೆ, ಅರಸನಾದ ಹಿಜ್ಕೀಯನು ಲೇವಿಯರನ್ನು ತಾಳ, ತಂತಿವಾದ್ಯ ಮತ್ತು ಕಿನ್ನರಿಗಳೊಂದಿಗೆ ದೇವಾಲಯದಲ್ಲಿ ಇರಿಸಿದನು. ಈ ಆಜ್ಞೆಯು ಯೆಹೋವನಿಂದ ಪ್ರವಾದಿಗಳ ಮೂಲಕ ಬಂದಿತ್ತು.


ನಿಮ್ಮ ನಿಮ್ಮ ವಂಶಕ್ರಮದ ಮೇರೆಗೆ ದೇವಾಲಯದೊಳಗೆ ಸೇವೆಮಾಡಲು ನಿಮ್ಮನ್ನು ಸಿದ್ಧಮಾಡಿಕೊಳ್ಳಿರಿ. ಅರಸನಾದ ದಾವೀದನೂ ಅವನ ಮಗನಾದ ಸೊಲೊಮೋನನೂ ನಿಮಗೆ ಕೊಟ್ಟ ಸೇವಾ ಜವಾಬ್ದಾರಿಕೆಗಳನ್ನು ನಡಿಸಿರಿ.


ಅದಕ್ಕೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಲ್ಲಿ ನಾಲ್ಕು ಬಾಗಿಲುಗಳಿದ್ದವು.


ಎಲ್ಲಾಜಾರ್ ಮತ್ತು ಈತಾಮಾರ್ ಕುಲದ ಯಾಜಕರನ್ನು ದಾವೀದನು ಪ್ರತ್ಯೇಕಿಸಿ ಚಾದೋಕ್ ಮತ್ತು ಅಹೀಮೆಲೆಕ್ ಯಾಜಕರ ಸಹಾಯದಿಂದ ಎರಡು ವರ್ಗಗಳನ್ನಾಗಿ ಮಾಡಿದನು. ಚಾದೋಕನು ಎಲ್ಲಾಜಾರನ ವಂಶದವನಾಗಿದ್ದನು ಮತ್ತು ಅಹೀಮೆಲೆಕನು ಈತಾಮಾರನ ವಂಶದವನಾಗಿದ್ದನು.


ಅಶುದ್ಧರಾದವರು ದೇವಾಲಯದೊಳಗೆ ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನು ನೇಮಿಸಿದನು.


ಆಸಾಫನ ಕುಟುಂಬದವರಾದ ಲೇವಿಗಾಯಕರು ದಾವೀದನಿಂದ ನೇಮಕಗೊಂಡಿದ್ದ ಸ್ಥಳದಲ್ಲಿ ನಿಂತುಕೊಂಡರು. ಅವರು ಯಾರೆಂದರೆ: ಆಸಾಫ್, ಹೇಮಾನ್ ಮತ್ತು ಅರಸನ ಪ್ರವಾದಿಯಾಗಿದ್ದ ಯೆದೂತೂನ್. ದ್ವಾರಪಾಲಕರು ತಮ್ಮತಮ್ಮ ಸ್ಥಳಗಳಲ್ಲಿಯೇ ನಿಂತಿದ್ದರು. ಅವರು ತಮ್ಮ ಸ್ಥಳಗಳನ್ನು ಬಿಟ್ಟುಹೋಗುವ ಅಗತ್ಯವಿರಲಿಲ್ಲ ಯಾಕಂದೆರ ಪಸ್ಕದ ಯಜ್ಞಗಳನ್ನು ಅವರ ಸೋದರರಾದ ಲೇವಿಯರು ಅವರಿಗಾಗಿ ಮಾಡಿದರು.


ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣದ ಕೋಣಿಗಳನ್ನು ಕಾಯುತ್ತಿದ್ದವರು ಯಾರೆಂದರೆ: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್ ಮತ್ತು ಅಕ್ಕೂಬ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು