2 ಪೂರ್ವಕಾಲ ವೃತ್ತಾಂತ 8:15 - ಪರಿಶುದ್ದ ಬೈಬಲ್15 ಸೊಲೊಮೋನನು ಯಾಜಕರಿಗಾಗಲಿ ಲೇವಿಯರಿಗಾಗಲಿ ಕೊಟ್ಟ ಆಜ್ಞೆಗಳನ್ನು ಯಾರೂ ಬದಲಿಸಲಿಲ್ಲ; ಅವುಗಳಿಗೆ ಯಾರೂ ಅವಿಧೇಯರಾಗಲಿಲ್ಲ; ಬೆಲೆಬಾಳುವ ವಸ್ತುಗಳ ಸಂಗ್ರಹಣ ಕಾರ್ಯದಲ್ಲೂ ಅವರು ಜಾಗರೂಕರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನು ಯಾಜಕರನ್ನೂ ಲೇವಿಯರನ್ನೂ ಅರಮನೆಯ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಕಿಂಚಿತ್ತಾದರೂ ಮೀರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಯಾಜಕರನ್ನೂ ಲೇವಿಯರನ್ನೂ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರು ಯಾವ ಕಾರ್ಯದಲ್ಲಾದರೂ, ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ಮೀರಲಿಲ್ಲ. ಅಧ್ಯಾಯವನ್ನು ನೋಡಿ |
ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.