Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:16 - ಪರಿಶುದ್ದ ಬೈಬಲ್‌

16 ದೇವಾಲಯವನ್ನು ಕಟ್ಟುವ ಕಾರ್ಯವು ಪ್ರಾರಂಭದಿಂದ ಹಿಡಿದು ಕೊನೆಯತನಕ ಎಲ್ಲವೂ ಯೋಜನೆಗನುಸಾರವಾಗಿ ನಡೆಯಿತು. ಹೀಗೆ ದೇವಾಲಯದ ಕಾರ್ಯವೆಲ್ಲಾ ಮುಕ್ತಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಪ್ರಕಾರ ಆಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸ ಕಾರ್ಯಗಳೂ ಮುಗಿದು ಯೆಹೋವನ ಆಲಯವು ಪೂರ್ಣಗೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಪ್ರಕಾರ ಅಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸವೂ ಮುಗಿದು ಸರ್ವೇಶ್ವರನ ಆಲಯ ಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಪ್ರಕಾರ ಅಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸವೂ ಮುಗಿದು ಯೆಹೋವನ ಆಲಯವು ಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರ ಆಲಯದ ಅಸ್ತಿವಾರ ಹಾಕಿದ ದಿವಸದವರೆಗೂ ಅದನ್ನು ಕಟ್ಟಿಸಿ ತೀರಿಸುವವರೆಗೂ ಸೊಲೊಮೋನನ ಕೆಲಸವೆಲ್ಲಾ ಮುಗಿದು, ಯೆಹೋವ ದೇವರ ಆಲಯವು ಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:16
6 ತಿಳಿವುಗಳ ಹೋಲಿಕೆ  

ಈ ಗೋಡೆಗಳನ್ನು ಕಟ್ಟಲು ಕೆಲಸಗಾರರು ದೊಡ್ಡದೊಡ್ಡ ಕಲ್ಲುಗಳನ್ನು ಬಳಸಿದ್ದರು. ಕಲ್ಲುಗಣಿಯಿಂದ ಕಲ್ಲುಗಳನ್ನು ಹೊರಗೆ ತೆಗೆಯುವಾಗಲೇ ಕೆಲಸಗಾರರು ಈ ಕಲ್ಲುಗಳನ್ನು ಕೆತ್ತಿದ್ದರು. ಆದ್ದರಿಂದ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಉಪಕರಣಗಳ ಶಬ್ದವು ದೇವಾಲಯದಲ್ಲಿ ಕೇಳಿಸುತ್ತಿರಲಿಲ್ಲ.


ನಂತರ ಸೊಲೊಮೋನನ ಮತ್ತು ಹೀರಾಮನ ಕಟ್ಟಡ ಕಟ್ಟುವವರು ಮತ್ತು ಗೆಬಾಲ್ಯ ಜನರು ಈ ಕಲ್ಲುಗಳನ್ನು ಕೆತ್ತಿದರು. ಅವರು ಕಲ್ಲುಗಳನ್ನು ಮತ್ತು ತೊಲೆಗಳನ್ನು ದೇವಾಲಯದ ನಿರ್ಮಾಣಕ್ಕಾಗಿ ಸಿದ್ಧಗೊಳಿಸಿದರು.


ಸೊಲೊಮೋನನು ಯಾಜಕರಿಗಾಗಲಿ ಲೇವಿಯರಿಗಾಗಲಿ ಕೊಟ್ಟ ಆಜ್ಞೆಗಳನ್ನು ಯಾರೂ ಬದಲಿಸಲಿಲ್ಲ; ಅವುಗಳಿಗೆ ಯಾರೂ ಅವಿಧೇಯರಾಗಲಿಲ್ಲ; ಬೆಲೆಬಾಳುವ ವಸ್ತುಗಳ ಸಂಗ್ರಹಣ ಕಾರ್ಯದಲ್ಲೂ ಅವರು ಜಾಗರೂಕರಾಗಿದ್ದರು.


ಆ ಬಳಿಕ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರದ ತೀರದಲ್ಲಿದ್ದ ಎಚ್ಯೋನ್ಗೆಬೆರ್ ಮತ್ತು ಏಲೋತ್ ಎಂಬ ಪಟ್ಟಣಗಳಿಗೆ ಹೋದನು.


ಅವರು ವರ್ಷದ ಎರಡನೆಯ ತಿಂಗಳಿನ ಜೀವ್ (ವೈಶಾಖ) ಮಾಸದಲ್ಲಿ ದೇವಾಲಯವನ್ನು ಕಟ್ಟಲಾರಂಭಿಸಿದರು. ಇಸ್ರೇಲನ್ನು ಸೊಲೊಮೋನನು ಆಳಲು ಆರಂಭಿಸಿದ ನಾಲ್ಕನೆಯ ವರ್ಷದಲ್ಲಿ ಇದು ನಡೆಯಿತು.


ಈ ದೇವಾಲಯದ ನಿರ್ಮಾಣವು ವರ್ಷದ ಎಂಟನೇ ತಿಂಗಳಾದ ಬುಲ್ (ಕಾರ್ತಿಕ) ತಿಂಗಳಲ್ಲಿ ಮುಗಿಯಿತು. ಅದು ಸೊಲೊಮೋನನ ಆಳ್ವಿಕೆಯ ಹನ್ನೊಂದನೆಯ ವರ್ಷವಾಗಿತ್ತು. ದೇವಾಲಯವನ್ನು ಕಟ್ಟಲು ಏಳು ವರ್ಷ ಹಿಡಿಯಿತು. ದೇವಾಲಯವನ್ನು ಅದರ ನಿಯಮಾನುಸಾರವಾಗಿ ಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು