Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:6 - ಪರಿಶುದ್ದ ಬೈಬಲ್‌

6 ಅಲ್ಲದೆ, ಬಾಲಾತ್ ಪಟ್ಟಣ ಮತ್ತು ಇನ್ನಿತರ ಪಟ್ಟಣಗಳನ್ನು ಉಗ್ರಾಣ ನಗರಗಳನ್ನಾಗಿ ಮಾಡಿದನು. ಅವನು ರಥಗಳನ್ನು ಇಡುವದಕ್ಕಾಗಿಯೂ ಮತ್ತು ರಾಹುತರ ವಾಸಕ್ಕಾಗಿಯೂ ಪಟ್ಟಣಗಳನ್ನು ಕಟ್ಟಿಸಿದನು. ಜೆರುಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ಮತ್ತು ತನ್ನ ಆಡಳಿತದಲ್ಲಿದ್ದ ದೇಶಗಳಲ್ಲಿಯೂ ಸೊಲೊಮೋನನು ತನ್ನ ಇಷ್ಟದ ಪ್ರಕಾರ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬಾಲಾತೊರು ಮತ್ತು ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣಗಳನ್ನೂ, ರಾಹುತರ ಪಟ್ಟಣಗಳನ್ನೂ ಸೊಲೊಮೋನನು ಕಟ್ಟಿಸಿದನು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಾಲಾ ತೂರು, ತನ್ನ ಎಲ್ಲ ಉಗ್ರಾಣದ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣ, ರಾಹುತರ ಪಟ್ಟಣ ಇವುಗಳನ್ನೂ ಕಟ್ಟಿಸಿದನು. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬಾಲಾತೂರು, ತನ್ನ ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣ, ರಾಹುತರ ಪಟ್ಟಣ ಇವುಗಳನ್ನೂ ಕಟ್ಟಿಸಿದನು. ಮತ್ತು ಯೆರೂಸಲೇವಿುನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲದೆ, ಬಾಲಾತ್ ಪಟ್ಟಣವನ್ನೂ, ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:6
13 ತಿಳಿವುಗಳ ಹೋಲಿಕೆ  

ನನ್ನ ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಲೆಬನೋನಿನಿಂದ ನನ್ನೊಂದಿಗೆ ಬಾ! ಅಮಾನದ ತುದಿಯಿಂದಲೂ ಶೆನೀರಿನ ತುದಿಯಿಂದಲೂ ಹೆರ್ಮೋನಿನ ತುದಿಯಿಂದಲೂ ಸಿಂಹದ ಗವಿಗಳಿಂದಲೂ ಚಿರತೆಗಳ ಬೆಟ್ಟಗಳಿಂದಲೂ ಬಾ!


ದೊಡ್ಡಕಾರ್ಯಗಳನ್ನು ಮಾಡಲಾರಂಭಿಸಿದೆ; ನನಗೋಸ್ಕರ ಮನೆಗಳನ್ನು ಕಟ್ಟಿಸಿದೆ; ದ್ರಾಕ್ಷಿತೋಟಗಳನ್ನು ಮಾಡಿಸಿದೆ;


ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ದೊಡ್ಡ ಅರಸನಾದನು. ಅವನು ಯೆಹೂದ ದೇಶದಲ್ಲೆಲ್ಲಾ ಕೋಟೆಗಳನ್ನು ಕಟ್ಟಿಸಿದನು. ಉಗ್ರಾಣ ನಗರಗಳನ್ನು ಕಟ್ಟಿಸಿದನು.


ಅರಣ್ಯದಲ್ಲಿದ್ದ ತದ್ಮೋರ್ ಎಂಬ ಪಟ್ಟಣವನ್ನು ಸೊಲೊಮೋನನು ಕಟ್ಟಿದನು. ಆಮೇಲೆ ಹಮಾತಿನ ಎಲ್ಲಾ ಪಟ್ಟಣಗಳನ್ನು ಉಗ್ರಾಣ ಪಟ್ಟಣಗಳನ್ನಾಗಿ ಮಾಡಿದನು.


ಸೊಲೊಮೋನನು ಕುದುರೆಗಳನ್ನೂ ರಥಗಳನ್ನೂ ಸಂಗ್ರಹಿಸಲು ಪ್ರಾರಂಭಿಸಿ ಒಂದು ಸಾವಿರದ ನಾನೂರು ರಥಗಳನ್ನೂ ಹನ್ನೆರಡು ಸಾವಿರ ರಾಹುತರನ್ನೂ ತನ್ನ ಸೈನ್ಯಕ್ಕೆ ಕೂಡಿಸಿಕೊಂಡನು. ಅವುಗಳನ್ನು ರಥಗಳನ್ನಿಡುವ ನಗರಗಳಲ್ಲಿ ಇರಿಸಿದನು. ಅದರಲ್ಲಿ ಕೆಲವನ್ನು ತನ್ನ ಅರಮನೆಯಿರುವ ಜೆರುಸಲೇಮಿನಲ್ಲಿ ಇರಿಸಿದನು.


ಆದ್ದರಿಂದ ಅಸಂಖ್ಯವಾದ ರಥಗಳೂ ಕುದುರೆಗಳೂ ಸೊಲೊಮೋನನಲ್ಲಿದ್ದವು. ಅವನಲ್ಲಿ ಒಂದು ಸಾವಿರದ ನಾನೂರು ರಥಗಳು ಮತ್ತು ಹನ್ನೆರಡು ಸಾವಿರ ಕುದುರೆಗಳಿದ್ದವು. ಸೊಲೊಮೋನನು ಈ ರಥಗಳಿಗಾಗಿ ವಿಶೇಷವಾದ ನಗರಗಳನ್ನು ಕಟ್ಟಿಸಿದನು. ಆ ನಗರಗಳಲ್ಲಿ ರಥಗಳನ್ನು ಇರಿಸಿದನು. ರಾಜನಾದ ಸೊಲೊಮೋನನು ಕೆಲವು ರಥಗಳನ್ನು ಜೆರುಸಲೇಮಿನಲ್ಲಿ ತನ್ನ ಹತ್ತಿರ ಇಟ್ಟುಕೊಂಡನು.


ಅವನು “ಲೆಬನೋನಿನ ಅರಣ್ಯದ ಮನೆ” ಎಂಬ ಕಟ್ಟಡವನ್ನೂ ಕಟ್ಟಿಸಿದನು. ಅದರ ಉದ್ದ ನೂರೈವತ್ತು ಅಡಿಗಳು; ಅಗಲ ಎಪ್ಪತ್ತೈದು ಅಡಿಗಳು; ಎತ್ತರ ನಲವತ್ತೈದು ಅಡಿಗಳು. ಅದರಲ್ಲಿ ನಾಲ್ಕು ಸಾಲಿನ ದೇವದಾರು ಮರದ ಕಂಬಗಳಿದ್ದವು ಆ ಕಂಬಗಳ ಮೇಲೆ ದೇವದಾರು ಮರದ ಬೋದಿಗೆಗಳಿದ್ದವು.


ಎಲ್ತೆಕೇ, ಗಿಬ್ಬೆತೋನ್, ಬಾಲತ್,


ಸೊಲೊಮೋನನು ಯೆಹೋವನ ಆಲಯವನ್ನು ಮತ್ತು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು. ಸೊಲೊಮೋನನು ತಾನು ಕಟ್ಟಬೇಕೆಂದು ಅಪೇಕ್ಷಿಸಿದ ಎಲ್ಲವನ್ನು ಕಟ್ಟಿ ಮುಗಿಸಿದನು.


ಮೇಲಿನ ಬೇತ್ಹೋರೋನ್ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ನಗರಗಳನ್ನು ಸೊಲೊಮೋನನು ಬಲವಾದ ಕೋಟೆಯ ನಗರಗಳನ್ನಾಗಿ ಮತ್ತೆ ಕಟ್ಟಿದನು. ಆ ನಗರಗಳನ್ನು ಕೋಟೆ, ಕದ ಮತ್ತು ಹೆಬ್ಬಾಗಿಲುಗಳಿಂದ ಬಲಗೊಳಿಸಿದನು.


ಇಸ್ರೇಲರು ಇದ್ದ ದೇಶದಲ್ಲಿ ಅನ್ಯ ಜನರಾದ ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುತ್ತಿದ್ದರು. ಇವರನ್ನೆಲ್ಲಾ ಸೊಲೊಮೋನನು ಗುಲಾಮರನ್ನಾಗಿ ಉಪಯೋಗಿಸಿದನು. ಈ ಜನರು ಇಸ್ರೇಲರಾಗಿರಲಿಲ್ಲ. ಇಸ್ರೇಲರು ದೇಶವನ್ನು ವಶಪಡಿಸಿಕೊಂಡಾಗ ಅಲ್ಲಿದ್ದ ನಿವಾಸಿಗಳನ್ನು ಓಡಿಸದೆ ಬಿಟ್ಟವರ ಸಂತತಿಯವರಾಗಿದ್ದರು. ಅವರು ಈಗಲೂ ಅಲ್ಲಿಯೇ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು