Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:7 - ಪರಿಶುದ್ದ ಬೈಬಲ್‌

7-8 ಇಸ್ರೇಲರು ಇದ್ದ ದೇಶದಲ್ಲಿ ಅನ್ಯ ಜನರಾದ ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುತ್ತಿದ್ದರು. ಇವರನ್ನೆಲ್ಲಾ ಸೊಲೊಮೋನನು ಗುಲಾಮರನ್ನಾಗಿ ಉಪಯೋಗಿಸಿದನು. ಈ ಜನರು ಇಸ್ರೇಲರಾಗಿರಲಿಲ್ಲ. ಇಸ್ರೇಲರು ದೇಶವನ್ನು ವಶಪಡಿಸಿಕೊಂಡಾಗ ಅಲ್ಲಿದ್ದ ನಿವಾಸಿಗಳನ್ನು ಓಡಿಸದೆ ಬಿಟ್ಟವರ ಸಂತತಿಯವರಾಗಿದ್ದರು. ಅವರು ಈಗಲೂ ಅಲ್ಲಿಯೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ಇಸ್ರಾಯೇಲರಿಂದ ಸಂಹೃತರಾಗದೆ, ಕಾನಾನ್ ದೇಶದಲ್ಲಿ ಉಳಿದಿದ್ದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ, ಯೆಬೂಸಿಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲರಿಂದ ಸಂಹೃತರಾಗದೆ ಕಾನಾನ್ ನಾಡಿನಲ್ಲಿ ಅಳಿದುಳಿದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನೂ ಬಿಟ್ಟಿಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ಇಸ್ರಾಯೇಲ್ಯರಿಂದ ಸಂಹೃತರಾಗದೆ ಕಾನಾನ್ ದೇಶದಲ್ಲಿ ಉಳಿದ ಹಿತ್ತಿಯ ಅಮೋರಿಯ ಪೆರಿಜೀಯ ಹಿವ್ವಿಯ ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನೂ [ತನ್ನ ಕೆಲಸಕ್ಕಾಗಿ] ಬಿಟ್ಟಿ ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸೊಲೊಮೋನನು ಇಸ್ರಾಯೇಲರಲ್ಲದ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು, ಇವರಲ್ಲಿ ಉಳಿದ ಸಮಸ್ತ ಜನರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:7
7 ತಿಳಿವುಗಳ ಹೋಲಿಕೆ  

“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.


ಅಬ್ರಾಮನ ಮಂದೆಕಾಯುವವರು ಮತ್ತು ಲೋಟನ ಮಂದೆಕಾಯುವವರು ವಾದ ಮಾಡಲಾರಂಭಿಸಿದರು. ಆ ಕಾಲದಲ್ಲಿ ಕಾನಾನ್ಯರು ಮತ್ತು ಪೆರಿಜೀಯರು ಸಹ ಆ ಸ್ಥಳದಲ್ಲಿ ವಾಸವಾಗಿದ್ದರು.


ಅಲ್ಲದೆ, ಬಾಲಾತ್ ಪಟ್ಟಣ ಮತ್ತು ಇನ್ನಿತರ ಪಟ್ಟಣಗಳನ್ನು ಉಗ್ರಾಣ ನಗರಗಳನ್ನಾಗಿ ಮಾಡಿದನು. ಅವನು ರಥಗಳನ್ನು ಇಡುವದಕ್ಕಾಗಿಯೂ ಮತ್ತು ರಾಹುತರ ವಾಸಕ್ಕಾಗಿಯೂ ಪಟ್ಟಣಗಳನ್ನು ಕಟ್ಟಿಸಿದನು. ಜೆರುಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ಮತ್ತು ತನ್ನ ಆಡಳಿತದಲ್ಲಿದ್ದ ದೇಶಗಳಲ್ಲಿಯೂ ಸೊಲೊಮೋನನು ತನ್ನ ಇಷ್ಟದ ಪ್ರಕಾರ ಕಟ್ಟಿಸಿದನು.


ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆಪ್ಪಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.”


ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು