Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:1 - ಪರಿಶುದ್ದ ಬೈಬಲ್‌

1 ಸೊಲೊಮೋನನ ಪ್ರಖ್ಯಾತಿಯನ್ನು ಶೆಬದ ರಾಣಿಯು ಕೇಳಿ ಅವನನ್ನು ಕಠಿಣವಾದ ಪ್ರಶ್ನೆಗಳಿಂದ ಪರೀಕ್ಷಿಸುವದಕ್ಕಾಗಿ ಜೆರುಸಲೇಮಿಗೆ ಬಂದಳು. ಆಕೆಯು ದೊಡ್ಡ ಪರಿವಾರದೊಂದಿಗೆ ಬಂದಳು. ಜೊತೆಗೆ ಒಂಟೆಗಳ ಮೇಲೆ ಸುಗಂಧದ್ರವ್ಯವನ್ನೂ ಅಪರಿಮಿತವಾದ ಬಂಗಾರವನ್ನೂ ವಜ್ರವೈಢೂರ್ಯಗಳನ್ನೂ ಹೇರಿಕೊಂಡು ಬಂದಳು. ಅಲ್ಲಿ ಆಕೆ ಸೊಲೊಮೋನನ ಸಂಗಡ ಮಾತನಾಡಿ ತನ್ನಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಶೆಬಾದ ರಾಣಿ ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಜೆರುಸಲೇಮಿಗೆ ಬಂದಳು. ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ ಅವನನ್ನು ಒಗಟುಗಳಿಂದ ಪರೀಕ್ಷಿಸುವದಕ್ಕೆ ಯೆರೂಸಲೇವಿುಗೆ ಬಂದಳು. ಆಕೆಯು ಸುಗಂಧದ್ರವ್ಯ, ಅಪರಿವಿುತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ, ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:1
23 ತಿಳಿವುಗಳ ಹೋಲಿಕೆ  

“ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.


“ನ್ಯಾಯತೀರ್ಪಿನ ದಿನದಲ್ಲಿ ದಕ್ಷಿಣ ದೇಶದ ರಾಣಿಯು ಈ ಪೀಳಿಗೆಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು. ಏಕೆಂದರೆ ಆ ರಾಣಿಯು ಬಹುದೂರದಿಂದ ಸೊಲೊಮೋನನ ಜ್ಞಾನಬೋಧನೆಯನ್ನು ಕೇಳಲು ಬಂದಳು. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಾನು ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ!


ಆ ಬಳಿಕ ಶೆಬದ ರಾಣಿಯು ಸೊಲೊಮೋನ್ ಅರಸನಿಗೆ ನಾಲ್ಕು ಸಾವಿರದ ನೂರ ನಲವತ್ತು ಕಿಲೋಗ್ರಾಂ ಬಂಗಾರ, ಲೆಕ್ಕವಿಲ್ಲದಷ್ಟು ಸುಗಂಧದ್ರವ್ಯಗಳು ಮತ್ತು ಬೆಲೆಬಾಳುವ ವಜ್ರಗಳನ್ನು ಕೊಟ್ಟಳು. ಅಷ್ಟು ಅತ್ಯುತ್ತಮವಾದ ಸುಗಂಧದ್ರವ್ಯಗಳನ್ನು ಯಾರೂ ಸೊಲೊಮೋನನಿಗೆ ಕೊಟ್ಟಿರಲಿಲ್ಲ.


ಕೂಷನ ಗಂಡುಮಕ್ಕಳು: ಸೆಬಾ, ಹವೀಲ, ಸಬ್ತಾ, ರಗ್ಮ ಮತ್ತು ಸಬ್ತಕಾ. ರಗ್ಮನ ಗಂಡುಮಕ್ಕಳು: ಶೆಬಾ ಮತ್ತು ದೆದಾನ್.


ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.”


ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.


ನೀವು ಹಾವುಗಳು! ನೀವು ದುಷ್ಟರು! ಒಳ್ಳೆಯದನ್ನು ನೀವು ಹೇಗೆ ಹೇಳುವಿರಿ? ನಿಮ್ಮ ಹೃದಯದಲ್ಲಿ ತುಂಬಿರುವುದನ್ನೇ ನಿಮ್ಮ ಬಾಯಿ ಮಾತಾಡುತ್ತದೆ.


ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.


ಮಿದ್ಯಾನಿನ ಮತ್ತು ಏಫದ ಒಂಟೆಗಳ ಹಿಂಡು ರಾಜ್ಯವನ್ನು ದಾಟುವವು. ಶೆಬ ರಾಜ್ಯದ ಒಂಟೆಗಳ ಸಾಲು ಚಿನ್ನ ಮತ್ತು ಧೂಪವನ್ನು ಹೊತ್ತುಕೊಂಡು ನಿನ್ನ ಬಳಿಗೆ ಬರುವವು. ಜನರು ಯೆಹೋವನಿಗೆ ಸ್ತೋತ್ರಗಾನ ಹಾಡುವರು.


ಆಗ ಅವರು ಗಾದೆಗಳನ್ನು, ಸಾಮತಿಗಳನ್ನು, ಜ್ಞಾನದ ನುಡಿಗಳನ್ನು ಮತ್ತು ಒಗಟುಗಳನ್ನು ಅರ್ಥಮಾಡಿಕೊಳ್ಳುವರು.


ನನ್ನ ಕಷ್ಟಗಳನ್ನೂ ಚಿಂತೆಗಳನ್ನೂ ಆತನಿಗೆ ಅರಿಕೆಮಾಡಿಕೊಳ್ಳುವೆನು.


ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಪೂರ್ವಕಾಲದ ಗೂಡಾರ್ಥಗಳನ್ನು ಹೊರಪಡಿಸುವೆನು.


ರಾಜನು ಬಹುಕಾಲ ಬಾಳಲಿ! ಅವನಿಗೆ ಶೆಬಾ ಪ್ರಾಂತ್ಯದಿಂದ ಬಂಗಾರವು ಬರಲಿ. ರಾಜನಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. ಪ್ರತಿದಿನವೂ ಅವನನ್ನು ಆಶೀರ್ವದಿಸಿರಿ.


ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.


ನಾನು ಅವುಗಳನ್ನು ಕಿವುಗೊಟ್ಟು ಕೇಳಿದ್ದೇನೆ. ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ಅವುಗಳನ್ನು ನಿಮಗಾಗಿ ಹಾಡುವೆನು.


ನಾನು ನಿನಗೆ ಜ್ಞಾನವಿವೇಕಗಳನ್ನು ಕೊಡುವೆನು. ಅದರ ಜೊತೆಯಲ್ಲಿ ನಿನಗೆ ಐಶ್ವರ್ಯವನ್ನೂ ಘನತೆಯನ್ನೂ ದಯಪಾಲಿಸುವೆನು. ನಿನಗಿಂತ ಮುಂಚೆ ಇದ್ದ ಯಾವ ಅರಸನಿಗೂ ಇಂಥಾ ಐಶ್ವರ್ಯಗಳಾಗಲಿ ಘನತೆಯಾಗಲಿ ಇರಲಿಲ್ಲ. ಮತ್ತು ಇನ್ನು ಮುಂದೆಯೂ ಯಾವ ರಾಜನಿಗೂ ಇಂಥಾ ಘನತೆ ಮತ್ತು ಐಶ್ವರ್ಯಗಳಿರುವುದಿಲ್ಲ” ಎಂದು ಹೇಳಿದನು.


ದೇವರಾದ ಯೆಹೋವನು ದಾವೀದನ ಮಗನಾದ ಸೊಲೊಮೋನನೊಂದಿಗೆ ಇದ್ದುದರಿಂದ ಸೊಲೊಮೋನನು ಬಹು ಬಲಿಷ್ಠನಾದ ಅರಸನಾಗಿ ಪ್ರಖ್ಯಾತನಾದನು.


ಪ್ರಪಂಚದಲ್ಲಿನ ಯಾವುದೇ ವ್ಯಕ್ತಿಯ ಜ್ಞಾನಕ್ಕಿಂತಲೂ ಹೆಚ್ಚಿನ ಜ್ಞಾನವು ಅವನಲ್ಲಿತ್ತು. ಅವನು ಜೆರಹನ ಮಗನಾದ ಏತಾನನಿಗಿಂತಲೂ ಜ್ಞಾನಿಯಾಗಿದ್ದನು. ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದರಿಗಿಂತ ಅವನು ಜ್ಞಾನಿಯಾಗಿದ್ದನು. ರಾಜನಾದ ಸೊಲೊಮೋನನು ಇಸ್ರೇಲ್ ಮತ್ತು ಯೆಹೂದಗಳ ಸುತ್ತಮುತ್ತಲಿನ ಪ್ರದೇಶಗಳಲ್ಲೆಲ್ಲಾ ಪ್ರಸಿದ್ಧನಾಗಿದ್ದನು.


ಹನ್ನಳು “ಸ್ವಾಮೀ, ನಾನು ಯಾವುದೇ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿದಿಲ್ಲ. ನಾನು ಬಹುದುಃಖಿತಳು. ನಾನು ಯೆಹೋವನಲ್ಲಿ ನನ್ನ ಎಲ್ಲ ತೊಂದರೆಗಳನ್ನು ನಿವೇದಿಸಿಕೊಳ್ಳುತ್ತಿದ್ದೆನು.


ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರ ತಂದೆ. ದೆದಾನನ ಸಂತತಿಯವರು: ಅಶ್ಶೂರ್ಯರು ಲೆಟೂಶ್ಯರು ಮತ್ತು ಲೆಯುಮ್ಯರು.


ಓಬಾಲ್, ಅಬೀಮಯೇಲ್, ಶೆಬಾ,


ಅವನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಆಕೆಯ ಯಾವ ಪ್ರಶ್ನೆಯೂ ಅವನಿಗೆ ಕಷ್ಟಕರವೆನಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು