Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:15 - ಪರಿಶುದ್ದ ಬೈಬಲ್‌

15 ಸೊಲೊಮೋನನು ಇನ್ನೂರು ದೊಡ್ಡ ಗಾತ್ರದ ಗುರಾಣಿಗಳನ್ನು ಚಿನ್ನದ ತಗಡಿನಿಂದ ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಸುಮಾರು ಎಳು ಕಿಲೋಗ್ರಾಂಗಳಷ್ಟು ಚಿನ್ನವು ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರವು ಹಿಡಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅರಸ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಸುಮಾರು ಏಳು ಕಿಲೋಗ್ರಾಂ ಬಂಗಾರ ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಆರುನೂರು ತೊಲೆ ಬಂಗಾರ ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿ ಸುಮಾರು ಏಳು ಕಿಲೋಗ್ರಾಂ ತೂಕದ ಬಂಗಾರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:15
6 ತಿಳಿವುಗಳ ಹೋಲಿಕೆ  

ಶೀಶಕನು ಯೆಹೋವನ ಆಲಯದ ಭಂಡಾರವನ್ನು ಮತ್ತು ರಾಜನ ಅರಮನೆಯ ಭಂಡಾರವನ್ನು ತೆಗೆದುಕೊಂಡು ಹೋದನು. ಅರಾಮದ ರಾಜನಾದ ಹದದೆಜರನ ಅಧಿಕಾರಿಗಳಿಂದ ದಾವೀದನು ತೆಗೆದುಕೊಂಡಿದ್ದ ಬಂಗಾರದ ಗುರಾಣಿಗಳನ್ನೂ ಅವನು ತೆಗೆದುಕೊಂಡು ಹೋದನು. ದಾವೀದನು ಈ ಗುರಾಣಿಗಳನ್ನು ಜೆರುಸಲೇಮಿಗೆ ತಂದಿದ್ದನು. ಆದರೆ ಶೀಶಕನು ಎಲ್ಲಾ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಹೋದನು.


ಇತರ ದೇಶಗಳ ವ್ಯಾಪಾರಸ್ಥರು, ಅರೇಬಿಯದ ಎಲ್ಲಾ ರಾಜರುಗಳು ಮತ್ತು ದೇಶಾಧಿಪತಿಗಳು ಸೊಲೊಮೋನನಿಗೆ ಬೆಳ್ಳಿಬಂಗಾರಗಳನ್ನು ತಂದುಕೊಡುತ್ತಿದ್ದರು.


ಇದಲ್ಲದೆ ಮುನ್ನೂರು ಸಣ್ಣ ಗುರಾಣಿಗಳನ್ನೂ ಸೊಲೊಮೋನನು ಚಿನ್ನದ ತಗಡಿನಿಂದ ಮಾಡಿಸಿದನು; ಒಂದೊಂದು ಗುರಾಣಿಗೆ ಸುಮಾರು ನಾಲ್ಕು ಪೌಂಡ್ ಬಂಗಾರ ಹಿಡಿಯಿತು. ಈ ಗುರಾಣಿಗಳನ್ನೆಲ್ಲಾ ಸೊಲೊಮೋನನು “ಲೆಬನೋನಿನ ತೋಪು” ಎಂಬ ಅರಮನೆಯಲ್ಲಿ ಶೇಖರಿಸಿಟ್ಟನು.


ಪುಷ್ಪಪಾತ್ರೆಗಳನ್ನೂ ಕೊಂಬೆಗಳನ್ನೂ ಒಳಗೊಂಡಿರುವ ದೀಪಸ್ತಂಭವು ಅಖಂಡವಾಗಿದ್ದು ಅಪ್ಪಟ ಬಂಗಾರದಿಂದಲೂ ನಕಾಸಿ ಕೆಲಸದಿಂದಲೂ ಮಾಡಿದ್ದಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು