ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.
ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.
ರಾಜನಾದ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳಲು ಎಲ್ಲಾ ದೇಶಗಳ ಜನರೂ ಬರುತ್ತಿದ್ದರು. ಎಲ್ಲಾ ದೇಶದ ರಾಜರುಗಳು ತಮ್ಮ ದೇಶದ ಜ್ಞಾನಿಗಳನ್ನು ರಾಜನಾದ ಸೊಲೊಮೋನನ ಬಳಿಗೆ ಕಳುಹಿಸುತ್ತಿದ್ದರು.
ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.
ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.
ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.
ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.
ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು.
ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.
ಪ್ರತಿ ವರ್ಷವೂ ಆ ರಾಜರುಗಳು ಸೊಲೊಮೋನನಿಗೆ ಬಹುಮಾನಗಳನ್ನು ತರುತ್ತಿದ್ದರು. ಬೆಳ್ಳಿಬಂಗಾರದ ವಸ್ತುಗಳನ್ನು, ಬಟ್ಟೆಗಳನ್ನು, ಆಯುಧಗಳನ್ನು, ಸುಗಂಧವಸ್ತುಗಳನ್ನು, ಕುದುರೆಗಳನ್ನು ಮತ್ತು ಹೇಸರಕತ್ತೆಗಳನ್ನು ಕಾಣಿಕೆಯಾಗಿ ಅವನಿಗೆ ಕೊಡುತ್ತಿದ್ದರು.