Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:24 - ಪರಿಶುದ್ದ ಬೈಬಲ್‌

24 ಪ್ರತಿ ವರ್ಷವೂ ಆ ರಾಜರುಗಳು ಸೊಲೊಮೋನನಿಗೆ ಬಹುಮಾನಗಳನ್ನು ತರುತ್ತಿದ್ದರು. ಬೆಳ್ಳಿಬಂಗಾರದ ವಸ್ತುಗಳನ್ನು, ಬಟ್ಟೆಗಳನ್ನು, ಆಯುಧಗಳನ್ನು, ಸುಗಂಧವಸ್ತುಗಳನ್ನು, ಕುದುರೆಗಳನ್ನು ಮತ್ತು ಹೇಸರಕತ್ತೆಗಳನ್ನು ಕಾಣಿಕೆಯಾಗಿ ಅವನಿಗೆ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರೆಲ್ಲರೂ ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಸಲಕರಣಿಗಳು, ಶಸ್ತಾಸ್ತ್ರಗಳು, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವರೆಲ್ಲರು ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರೆಲ್ಲರೂ ಅವನಿಗೆ ವರುಷ ವರುಷ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಕತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:24
11 ತಿಳಿವುಗಳ ಹೋಲಿಕೆ  

ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.


ಯೋಬನ ಸಹೋದರಸಹೋದರಿಯರೂ ಅವನ ಪರಿಚಯಸ್ಥರೂ ಅವನ ಮನೆಗೆ ಬಂದರು; ಅವನೊಂದಿಗೆ ಊಟ ಮಾಡಿದರು; ಯೆಹೋವನು ಅವನಿಗೆ ಬಹಳ ಕಷ್ಟವನ್ನು ಬರಮಾಡಿದ್ದರಿಂದ ಅವರು ಮರುಕದಿಂದ ಅವನನ್ನು ಸಂತೈಸಿದರು. ಪ್ರತಿಯೊಬ್ಬರು ಯೋಬನಿಗೆ ಒಂದು ಬೆಳ್ಳಿಯ ನಾಣ್ಯವನ್ನೂ ಒಂದು ಚಿನ್ನದ ಉಂಗುರವನ್ನೂ ಕೊಟ್ಟರು.


ಆ ಬಳಿಕ ಶೆಬದ ರಾಣಿಯು ಸೊಲೊಮೋನ್ ಅರಸನಿಗೆ ನಾಲ್ಕು ಸಾವಿರದ ನೂರ ನಲವತ್ತು ಕಿಲೋಗ್ರಾಂ ಬಂಗಾರ, ಲೆಕ್ಕವಿಲ್ಲದಷ್ಟು ಸುಗಂಧದ್ರವ್ಯಗಳು ಮತ್ತು ಬೆಲೆಬಾಳುವ ವಜ್ರಗಳನ್ನು ಕೊಟ್ಟಳು. ಅಷ್ಟು ಅತ್ಯುತ್ತಮವಾದ ಸುಗಂಧದ್ರವ್ಯಗಳನ್ನು ಯಾರೂ ಸೊಲೊಮೋನನಿಗೆ ಕೊಟ್ಟಿರಲಿಲ್ಲ.


ಪ್ರತಿವರ್ಷವೂ ರಾಜನನ್ನು ನೋಡಲು ಜನರು ಬರುತ್ತಿದ್ದರು. ಪ್ರತಿಯೊಬ್ಬನೂ ಕಾಣಿಕೆಯನ್ನು ತರುತ್ತಿದ್ದನು. ಅವರು ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳನ್ನು, ಆಯುಧಗಳನ್ನು, ಉಡುಪುಗಳನ್ನು, ಸಾಂಬಾರ ಪದಾರ್ಥಗಳನ್ನು, ಕುದುರೆಗಳನ್ನು ಮತ್ತು ಹೇಸರಕತ್ತೆಗಳನ್ನು ತರುತ್ತಿದ್ದರು.


ನಂತರ ಶೆಬದ ರಾಣಿಯು ರಾಜನಿಗೆ ನಾಲ್ಕು ಸಾವಿರದ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಕೊಟ್ಟಳು. ಅವಳು ಅವನಿಗೆ ಅನೇಕ ಸಾಂಬಾರ ಪದಾರ್ಥಗಳನ್ನು ಮತ್ತು ರತ್ನಗಳನ್ನು ಕೊಟ್ಟಳು. ಹಿಂದೆಂದೂ ಯಾರೂ ಇಸ್ರೇಲಿಗೆ ತೆಗೆದುಕೊಂಡು ಬಂದಿಲ್ಲದಷ್ಟು ಸಾಂಬಾರ ಪದಾರ್ಥಗಳನ್ನು ಶೆಬದ ರಾಣಿಯು ಸೊಲೊಮೋನನಿಗೆ ಕೊಟ್ಟಳು.


ಹೀರಾಮನು ರಾಜನಾದ ಸೊಲೊಮೋನನಿಗೆ ಆಲಯದ ನಿರ್ಮಾಣಕ್ಕೆ ಉಪಯೋಗಿಸಲು ಒಂಭತ್ತು ಸಾವಿರ ಪೌಂಡು ಬಂಗಾರವನ್ನು ಕಳುಹಿಸಿದ್ದನು.


ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.


ದೇವರು ಅವನಿಗೆ ದಯಪಾಲಿಸಿದ ಜ್ಞಾನವನ್ನು ನೋಡಿ ಅವನಿಂದ ಜ್ಞಾನವಾಕ್ಯಗಳನ್ನು ಕೇಳಲು ಲೋಕದ ರಾಜರುಗಳು ಅವನ ಬಳಿಗೆ ಬರುತ್ತಿದ್ದರು.


ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪಕಾಣಿಕೆಯನ್ನು ಕೊಡಲು ಏಹೂದನನ್ನು ಕಳುಹಿಸಿದರು.


ಫಿಲಿಷ್ಟಿಯರಲ್ಲಿ ಕೆಲವರು ಅವನಿಗೆ ಬೆಳ್ಳಿಬಂಗಾರಗಳ ಕಾಣಿಕೆಗಳನ್ನು ತಂದುಕೊಟ್ಟರು; ಅವನೊಬ್ಬ ಬಲಿಷ್ಠನಾದ ರಾಜನೆಂದು ಅವರು ತಿಳಿದುಕೊಂಡಿದ್ದರು. ಅರಬಿಯದ ಜನರು ಯೆಹೋಷಾಫಾಟನಿಗೆ ಪಶುಗಳ ಹಿಂಡುಗಳನ್ನು ತಂದುಕೊಟ್ಟರು. ಅವುಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳು ಮತ್ತು ಏಳು ಸಾವಿರದ ಏಳುನೂರು ಹೋತಗಳು ಇದ್ದವು.


ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು