Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:28 - ಪರಿಶುದ್ದ ಬೈಬಲ್‌

28 ಜನರು ಸೊಲೊಮೋನನಿಗೋಸ್ಕರ ಈಜಿಪ್ಟ್ ಮತ್ತು ಬೇರೆ ದೇಶಗಳಿಂದ ಕುದುರೆಗಳನ್ನು ತಂದು ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸೊಲೊಮೋನನಿಗೋಸ್ಕರ ಐಗುಪ್ತ್ಯದಿಂದಲೂ ಹಾಗೂ ಬೇರೆ ದೇಶಗಳಿಂದಲೂ ಕುದುರೆಗಳನ್ನು ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸೊಲೊಮೋನನಿಗಾಗಿ ಈಜಿಪ್ಟ್ ಮುಂತಾದ ದೇಶಗಳಿಂದ ಕುದುರೆಗಳನ್ನು ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸೊಲೊಮೋನನಿಗೋಸ್ಕರ ಐಗುಪ್ತ ಮುಂತಾದ ಎಲ್ಲಾ ದೇಶಗಳಿಂದ ಕುದುರೆಗಳನ್ನು ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಸಮಸ್ತ ದೇಶಗಳಿಂದಲೂ ಕುದುರೆಗಳನ್ನು ತೆಗೆದುಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:28
6 ತಿಳಿವುಗಳ ಹೋಲಿಕೆ  

ಈಜಿಪ್ಟ್ ಮತ್ತು ಕ್ಯೂ ದೇಶಗಳಿಂದ ಸೊಲೊಮೋನನು ಕುದುರೆಗಳನ್ನು ತನ್ನ ವ್ಯಾಪಾರಸ್ಥರ ಮೂಲಕ ಖರೀದಿ ಮಾಡಿದನು.


ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.


ಸೊಲೊಮೋನನ ರಥಗಳಿಗೂ ರಥಾಶ್ವಗಳಿಗೂ ನಾಲ್ಕು ಸಾವಿರ ಲಾಯಗಳಿದ್ದವು. ಅವನ ಬಳಿಯಲ್ಲಿ ಹನ್ನೆರಡು ಸಾವಿರ ರಾಹುತರು ಇದ್ದರು. ಅವರನ್ನು ಪ್ರತ್ಯೇಕವಾದ ಪಟ್ಟಣಗಳಲ್ಲಿಯೂ ಜೆರುಸಲೇಮಿನಲ್ಲಿಯೂ ಇರಿಸಿದನು.


ಸೊಲೊಮೋನನು ಈಜಿಪ್ಟ್ ಮತ್ತು ಕ್ಯೂ ಪ್ರದೇಶಗಳಿಂದ ಕುದುರೆಗಳನ್ನು ಖರೀದಿಸಿ ಆಮದು ಮಾಡಿಕೊಂಡನು. ಅವನ ವ್ಯಾಪಾರಿಗಳು ಅವುಗಳನ್ನು ಕ್ಯೂ ಪ್ರಾಂತ್ಯದಿಂದ ಇಸ್ರೇಲಿಗೆ ತರುತ್ತಿದ್ದರು.


ಸೊಲೊಮೋನನ ವ್ಯಾಪಾರಿಗಳು ಈಜಿಪ್ಟಿನಲ್ಲಿ ಒಂದೊಂದು ರಥಕ್ಕೆ ಏಳು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಒಂದೊಂದು ಕುದುರೆಗೆ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಕೊಟ್ಟು ಖರೀದಿಸಿ ಅವುಗಳನ್ನು ಹಿತ್ತಿಯರ ಅರಸರಿಗೂ ಅರಾಮ್ಯರ ಅರಸರಿಗೂ ಮಾರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು