Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:8 - ಪರಿಶುದ್ದ ಬೈಬಲ್‌

8 ನಿನ್ನ ದೇವರಿಗೆ ಸ್ತೋತ್ರವಾಗಲಿ. ಆತನು ನಿನ್ನಲ್ಲಿ ಸಂತೋಷಿಸಿ ತನ್ನ ಸಿಂಹಾಸನದಲ್ಲಿ ನಿನ್ನನ್ನು ಕುಳ್ಳಿರಿಸಿದ್ದಾನೆ. ನಿನ್ನ ದೇವರು ಇಸ್ರೇಲನ್ನು ಪ್ರೀತಿಸುತ್ತಾನೆ ಮತ್ತು ಶಾಶ್ವತವಾಗಿ ಪೋಷಿಸುತ್ತಾನೆ. ಅದಕ್ಕಾಗಿಯೇ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡುವುದಕ್ಕಾಗಿ ನಿನ್ನನ್ನು ಇಸ್ರೇಲಿನ ಅರಸನನ್ನಾಗಿ ಮಾಡಿದ್ದಾನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮನ್ನು ಮೆಚ್ಚಿ, ತಮ್ಮ ಸಮ್ಮುಖದಲ್ಲಿ ಅರಸನಾಗಿಸಲು, ತಮ್ಮ ಸಿಂಹಾಸನದ ಮೇಲೆ ನಿಮ್ಮನ್ನು ಕುಳ್ಳಿರಿಸಿದ ಆ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನಿಮ್ಮ ದೇವರು ಇಸ್ರಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿದ್ದಾರೆ. ಆದ್ದರಿಂದಲೇ ಈ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನೇ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನನ್ನು ಮೆಚ್ಚಿ ತನ್ನ ಸನ್ನಿಧಿಯಲ್ಲಿ ಅರಸನಾಗುವದಕ್ಕೆ ನಿನ್ನನ್ನು ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲ್ಯರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನ್ನ ದೇವರಾದ ಯೆಹೋವ ದೇವರಿಗೋಸ್ಕರ ಅರಸನಾಗಿರುವಂತೆ ತಮ್ಮ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ಅವರನ್ನು ಯುಗಯುಗಕ್ಕೂ ಸ್ಥಿರಗೊಳಿಸಬೇಕೆಂದಿದ್ದಾರೆ. ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:8
31 ತಿಳಿವುಗಳ ಹೋಲಿಕೆ  

ಅದಕ್ಕೆ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ಹೀಗೆ ಉತ್ತರಿಸಿದನು: “ಸೊಲೊಮೋನನೇ, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಆದ್ದರಿಂದಲೇ ನಿನ್ನನ್ನು ಅವರ ಅರಸನನ್ನಾಗಿ ಆರಿಸಿಕೊಂಡಿರುತ್ತಾನೆ.


ಆ ಬಳಿಕ ಸೊಲೊಮೋನನು ತನ್ನ ತಂದೆಯ ಬದಲಾಗಿ ರಾಜನಾಗಿ ಪ್ರಭುವಿನ ಸಿಂಹಾಸನದ ಮೇಲೆ ಕುಳಿತುಕೊಂಡನು. ಸೊಲೊಮೋನನನ್ನು ಎಲ್ಲಾ ಇಸ್ರೇಲರು ಗೌರವಿಸಿದರು ಮತ್ತು ವಿಧೇಯರಾದರು.


ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಸರಿಯಾದ ಮತ್ತು ನ್ಯಾಯವಾದ ಕಾರ್ಯಗಳನ್ನು ಮಾಡು. ಯೆಹೋವನು ಅವುಗಳನ್ನು ಯಜ್ಞಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.


ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.


ನಿನ್ನ ಜನರಿಗೆ ನೀತಿಯಿಂದಲೂ ನಿನ್ನ ಬಡಜನರಿಗೆ ನ್ಯಾಯವಾಗಿಯೂ ತೀರ್ಪುಮಾಡಲು ಅವನಿಗೆ ಸಹಾಯಮಾಡು.


“ಯೆಹೋವನಿಗೆ ಮೊರೆಯಿಡು, ಆತನು ನಿನ್ನನ್ನು ರಕ್ಷಿಸಬಹುದು. ಆತನು ನಿನ್ನನ್ನು ಬಹಳವಾಗಿ ಇಷ್ಟಪಡುವುದಾದರೆ ನಿನ್ನನ್ನು ಖಂಡಿತವಾಗಿ ರಕ್ಷಿಸುವನು” ಎಂದು ಹೇಳುತ್ತಾರೆ.


ಆತನು ನನ್ನನ್ನು ಪ್ರೀತಿಸುವುದರಿಂದ ನನ್ನನ್ನು ರಕ್ಷಿಸಿದನು; ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ಕರೆದುಕೊಂಡು ಬಂದನು.


ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು.


ನೆರೆದುಬಂದಿದ್ದ ಎಲ್ಲಾ ಜನರ ಮುಂದೆ ದಾವೀದನು ದೇವರಾದ ಯೆಹೋವನನ್ನು ಸ್ತುತಿಸಿ ಹೀಗೆ ಪ್ರಾರ್ಥಿಸಿದನು: “ಇಸ್ರೇಲರ ದೇವರಾದ ಯೆಹೋವನೇ, ನಮ್ಮ ತಂದೆಯೇ, ನಿನಗೆ ನಿರಂತರವಾಗಿ ಕೊಂಡಾಟವಾಗಲಿ.


ಯೆಹೋವನು ನನಗೆ ಅನೇಕ ಮಕ್ಕಳನ್ನು ಕೊಟ್ಟನು. ಆ ಮಕ್ಕಳಲ್ಲಿ ಯೆಹೋವನು ಸೊಲೊಮೋನನನ್ನು ನನ್ನ ನಂತರ ಇಸ್ರೇಲರ ಅರಸನನ್ನಾಗಿ ಆರಿಸಿಕೊಂಡಿದ್ದಾನೆ. ಆದರೆ ನಿಜವಾಗಿಯೂ, ಇಸ್ರೇಲ್, ದೇವರಾದ ಯೆಹೋವನ ರಾಜ್ಯವಾಗಿದೆ.


ಇಸ್ರೇಲರನ್ನು ಸದಾಕಾಲಕ್ಕೂ ನಿನ್ನ ಜನರನ್ನಾಗಿ ಮಾಡಿಕೊಂಡೆ. ಯೆಹೋವನೇ, ನೀನೇ ಅವರಿಗೆ ದೇವರಾದೆ!


ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ನಿನ್ನನ್ನು ಇಸ್ರೇಲಿನ ರಾಜನಾಗಿ ಮಾಡಲು ಆತನು ಸಂತೋಷಪಟ್ಟಿರಬೇಕು. ದೇವರಾದ ಯೆಹೋವನು ಇಸ್ರೇಲನ್ನು ಸದಾ ಪ್ರೀತಿಸುತ್ತಾನೆ. ಆದ್ದರಿಂದಲೇ ಆತನು ನಿನ್ನನ್ನು ರಾಜನನ್ನಾಗಿ ನೇಮಿಸಿದನು. ನೀನು ಕಟ್ಟಳೆಗಳನ್ನು ಅನುಸರಿಸುತ್ತಿರುವೆ ಮತ್ತು ಜನರಿಗೆ ನ್ಯಾಯ ದೊರಕಿಸುತ್ತಿರುವೆ” ಎಂದು ಹೇಳಿದಳು.


ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.


ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. ‘ದೇವರಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು


ದಾವೀದನು ಸಮಸ್ತ ಇಸ್ರೇಲರನ್ನು ಆಳಿದನು. ದಾವೀದನು ಜನರಿಗೆ ನ್ಯಾಯವಾದ ಮತ್ತು ಸರಿಯಾದ ತೀರ್ಪುಗಳನ್ನು ಕೊಡುತ್ತಿದ್ದನು.


ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ನಿನ್ನ ಹೆಂಡತಿಯರೂ ನಿನ್ನ ಅಧಿಕಾರಿಗಳೂ ಧನ್ಯರು. ನಿನ್ನ ಸೇವೆಮಾಡುವ ಇವರು ನಿನ್ನ ಜ್ಞಾನೋಪದೇಶವನ್ನು ಯಾವಾಗಲೂ ಕೇಳುವರು.


ಆ ಬಳಿಕ ಶೆಬದ ರಾಣಿಯು ಸೊಲೊಮೋನ್ ಅರಸನಿಗೆ ನಾಲ್ಕು ಸಾವಿರದ ನೂರ ನಲವತ್ತು ಕಿಲೋಗ್ರಾಂ ಬಂಗಾರ, ಲೆಕ್ಕವಿಲ್ಲದಷ್ಟು ಸುಗಂಧದ್ರವ್ಯಗಳು ಮತ್ತು ಬೆಲೆಬಾಳುವ ವಜ್ರಗಳನ್ನು ಕೊಟ್ಟಳು. ಅಷ್ಟು ಅತ್ಯುತ್ತಮವಾದ ಸುಗಂಧದ್ರವ್ಯಗಳನ್ನು ಯಾರೂ ಸೊಲೊಮೋನನಿಗೆ ಕೊಟ್ಟಿರಲಿಲ್ಲ.


ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು.


ನಿನ್ನ ಜನರು ಮರಗಳನ್ನು ಕಡಿದು ಸಾಗಿಸುವ ಕಾರ್ಯಕ್ಕೆ ನಾನು ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಗೋಧಿಯನ್ನೂ ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಜವೆಗೋಧಿಯನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ದ್ರಾಕ್ಷಾರಸವನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ಎಣ್ಣೆಯನ್ನೂ ಕೊಡುವೆನು.”


“ದಾವೀದನ ಮಕ್ಕಳು ಆಳುತ್ತಿರುವ ಯೆಹೋವನ ರಾಜ್ಯವನ್ನು ಸೋಲಿಸಲು ಈಗ ನೀವು ನಿರ್ಧರಿಸಿದ್ದೀರಿ. ನಿಮ್ಮಲ್ಲಿ ಅಧಿಕ ಸಂಖ್ಯೆಯ ಸೈನ್ಯವಿರಬಹುದು. ಯಾರೊಬ್ಬಾಮನು ನಿಮ್ಮ ದೇವರುಗಳಾಗಿ ಮಾಡಿಸಿದ ಬಂಗಾರದ ಬಸವ ಮೂರ್ತಿಗಳು ನಿಮ್ಮಲ್ಲಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು