2 ಪೇತ್ರನು 1:1 - ಪರಿಶುದ್ದ ಬೈಬಲ್1 ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜೆಜು ಕ್ರಿಸ್ತಾಚೊ ಅಪೊಸ್ತಲ್ ಅನಿ ಸೆವಕ್ ಸಿಮಾವ್ ಪೆದ್ರು, ಅಮ್ಚ್ಯಾ ದೆವಾಚ್ಯಾ ನಿತಿವಂತ್ಪಾನಾ ಅನಿ ಸುಟ್ಕಾ ದಿನಾರ್‍ಯಾ ಜೆಜು ಕ್ರಿಸ್ತಾಚೊ ವಿಶ್ವಾಸ್ ಕಿಮ್ತಿಚೊ ಮನುನ್ ದಿಲ್ಲ್ಯಾಕ್ನಿ ಲಿವ್ತಲೆ: ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.