2 ಪೇತ್ರನು 1:12 - ಪರಿಶುದ್ದ ಬೈಬಲ್12 ಇವೆಲ್ಲವೂ ನಿಮಗೆ ತಿಳಿದಿದೆ. ನಿಮ್ಮಲ್ಲಿರುವ ಸತ್ಯದಲ್ಲಿ ನೀವು ಸ್ಥಿರವಾಗಿದ್ದೀರಿ. ಆದರೆ ಇವುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳುವಂತೆ ನಾನು ನಿಮಗೆ ಯಾವಾಗಲೂ ಸಹಾಯ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈ ವಿಷಯಗಳೆಲ್ಲಾ ನಿಮಗೆ ತಿಳಿದೇ ಇವೆ; ನೀವು ಅಂಗೀಕರಿಸಿದ ಸತ್ಯದಲ್ಲಿ ಸ್ಥಿರವಾಗಿಯೂ ಇದ್ದೀರಿ. ಆದರೂ ಇವುಗಳನ್ನು ಪದೇ ಪದೇ ನಿಮ್ಮ ಜ್ಞಾಪಕಕ್ಕೆ ತರಲು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರಕಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮ್ಮ ನೆನಪಿಗೆ ತರಲು ನಾನು ಬಯಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಹೆಚ್ಯಾಸಾಟ್ನಿ ಹೆ ಸಗ್ಳೆ ಅದ್ದಿಚ್ ತುಮ್ಕಾ ಗೊತ್ತ್ ರ್‍ಹಾಲ್ಯಾರ್‍ಬಿ ತುಮಿ ಘೆಟಲ್ಲ್ಯಾ ಖರೆಪಾನಾತ್ ತುಮಿ ಘಟ್ ಹಾಸಿ, ಹೊಲ್ಲ್ಯಾರ್ಬಿ ಕನ್ನಾಬಿ ಮಿಯಾ ತುಮ್ಕಾ ಹಿ ಯಾದ್ ಕರುನ್ ದಿತಾ. ಅಧ್ಯಾಯವನ್ನು ನೋಡಿ |
ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.
ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.