2 ಪೇತ್ರನು 1:13 - ಪರಿಶುದ್ದ ಬೈಬಲ್13 ನಾನು ಈ ಲೋಕದಲ್ಲಿ ಇನ್ನೂ ಜೀವದಿಂದಿರುವಾಗಲೇ ಇವುಗಳನ್ನು ನಿಮ್ಮ ನೆನಪಿಗೆ ತರುವುದು ಯೋಗ್ಯವಾದದ್ದೆಂಬುದು ನನ್ನ ಆಲೋಚನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ಈ ದೇಹವೆಂಬ ಗುಡಾರದಲ್ಲಿ ಜೀವಿಸಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ, ಪ್ರೋತ್ಸಾಹಿಸುವುದು ಉಚಿತವೆಂದು ಎಣಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ನನ್ನ ದೇಹವೆಂಬ ಗುಡಾರದಲ್ಲಿ ಬಾಳುವ ತನಕ ನಿಮ್ಮ ನೆನಪಿಗೆ ತರುವುದು ಯುಕ್ತವೆಂದೆಣಿಸಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಹ್ಯಾ ಜಗಾತ್ ಝಿತ್ತೊ ರ್‍ಹಾಯ್ ಪತರ್ ತುಮ್ಚ್ಯಾ ಮನಾಕ್ನಿ ಹೆ ಸಗ್ಳೆ ಹಾನ್ತಲೆ ಬರೆ ಮನ್ತಲಿ ಮಾಜಿ ಯವ್ಜನ್. ಅಧ್ಯಾಯವನ್ನು ನೋಡಿ |
ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.
ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.