2 ಪೇತ್ರನು 1:15 - ಪರಿಶುದ್ದ ಬೈಬಲ್15 ನೀವು ಇವುಗಳನ್ನು ಯಾವಾಗಲೂ ನೆನಪು ಮಾಡಿಕೊಳ್ಳಲು ನಿಮಗೆ ನನ್ನಿಂದಾದಷ್ಟು ಸಹಾಯಮಾಡಲು ನಾನು ಪ್ರಯತ್ನಿಸುತ್ತೇನೆ. ನಾನು ಈ ಲೋಕವನ್ನು ಬಿಟ್ಟುಹೋದ ನಂತರವೂ ನೀವು ಈ ಸಂಗತಿಗಳನ್ನು ನೆನಪು ಮಾಡಿಕೊಳ್ಳಲು ಸಮರ್ಥರಾಗಿರಬೇಕೆಂಬುದು ನನ್ನ ಅಪೇಕ್ಷೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನನ್ನ ಮರಣಾ ನಂತರವೂ ಈ ವಿಷಯಗಳನ್ನು ನೀವು ಯಾವಾಗಲೂ ಜ್ಞಾಪಕಕ್ಕೆ ತಂದುಕೊಳ್ಳಲು ಸಾಧ್ಯವಾಗುವಂತೆ ಈಗಲೇ ನನ್ನಿಂದಾದಷ್ಟು ಪ್ರಯತ್ನಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೂ ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ನೆನಪಿಟ್ಟುಕೊಳ್ಳುವಂತೆ ನನ್ನಿಂದಾದಷ್ಟು ಪ್ರಯಾಸಪಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅಸೆ ರ್‍ಹಾತಾನಾ, ಮಾಜ್ಯಾ ಮರ್ನಾಚ್ಯಾ ಮಾನಾ ಹಿ ವಿಶಯಾ ತುಮ್ಕಾ ಯಾದ್ ರ್‍ಹಾಯ್ ಸಾರ್ಕೆ ಕರುಕ್ ಮಿಯಾ ಮಾಕಾ ಹೊತಾ ತವ್ಡೆ ಬರೆ ಕರುಕ್ ಖಟ್ಪಟ್ತಾ. ಅಧ್ಯಾಯವನ್ನು ನೋಡಿ |
ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.