2 ಪೇತ್ರನು 1:16 - ಪರಿಶುದ್ದ ಬೈಬಲ್16 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಕ್ತಿಯ ಕುರಿತಾಗಿ ಮತ್ತು ಆತನ ಬರುವಿಕೆಯ ಕುರಿತಾಗಿ ನಿಮಗೆ ತಿಳಿಸಿದ್ದೇವೆ. ಆ ಸಂಗತಿಗಳು ಜನರಿಂದ ಕಲ್ಪಿತವಾದ ಜಾಣ್ಮೆಯ ಕಥೆಗಳಲ್ಲ. ಯೇಸುವಿನ ಮಹಿಮೆಯನ್ನು ನಾವು ಕಣ್ಣಾರೆ ಕಂಡಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ತಿಳಿಯಪಡಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶಕ್ತಿಯ ಬಗ್ಗೆಯೂ ಅವರ ಪುನರಾಗಮನದ ಬಗ್ಗೆಯೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಕುತಂತ್ರವಾಗಿ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿಸಲಿಲ್ಲ. ಆದರೆ ನಾವೇ ಕ್ರಿಸ್ತ ಯೇಸುವಿನ ಮಹತ್ತನ್ನು ಕಣ್ಣಾರೆ ಕಂಡವರಾಗಿ ತಿಳಿಯಪಡಿಸಿದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅಮ್ಚ್ಯಾ ಯೆತಲ್ಯಾ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ತಾಕ್ತಿಚ್ಯಾ ವಿಶಯಾತ್ ಕಳ್ವುಲ್ಯಾಂವ್, ಕಾನಿಯಾಂಚ್ಯಾ ವೈರ್ ಅಮಿ ಹೊಂದುನ್ ನಾ, ಹೆ ಸಗ್ಳ್ಯೆ ಅಮಿ ಜೆಜುಚಿ ಮಹಿಮಾ ಅಮಿ ಡೊಳ್ಯಾನಿ ಬಗಟ್ಲಾಂವ್. ಅಧ್ಯಾಯವನ್ನು ನೋಡಿ |
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.