2 ಪೇತ್ರನು 1:17 - ಪರಿಶುದ್ದ ಬೈಬಲ್17 ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಆ ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ಮೆಚ್ಚಿದ್ದೇನೆ ಎಂಬಂಥ ವಾಣಿಯು ಸರ್ವೋತ್ಕೃಷ್ಟಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಘನಮಾನಗಳನ್ನು ಹೊಂದಿದನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿಯು ಮಹೋನ್ನತ ಮಹಿಮೆಯಿಂದ ಅವರಿಗೆ ಉಂಟಾದದ್ದರಲ್ಲಿ ಅವರು ತಂದೆ ದೇವರಿಂದ ಗೌರವವನ್ನೂ ಮಹಿಮೆಯನ್ನೂ ಹೊಂದಿದರಲ್ಲವೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ದೆವಾ ಬಾಬಾನ್ ಮಹಿಮಾ ಅನಿ ಮಾನ್ ತೆಕಾ ದಿತಾನಾ ಅಮಿ ಥೈ ಹೊತ್ತಾಂವ್, ತನ್ನಾ ಮೊಟ್ಯಾ ಮಹಿಮೆಕ್ನಾ ಎಕ್ ಧನ್ ತೆಕಾ ಆಯ್ಕೊಯೆಲೊ ತೊ ಧನ್ “ಹೊ ಮಾಜೊ ಅಪುರ್‍ಬಾಯೆಚೊ ಲೆಕ್, ಹೊ ಮಾಜ್ಯಾ ಮನಾಕ್ ಯೆಲಾ!” ಅಧ್ಯಾಯವನ್ನು ನೋಡಿ |
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.