ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.
“ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”
‘ಪ್ರಭುವು ನನ್ನ ಪ್ರಭುವಿಗೆ, ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ನನ್ನೊಂದಿಗೆ ಕುಳಿತುಕೊಂಡಿರು’ ಎಂದು ಹೇಳಿದ್ದಾನೆ ಎಂಬುದಾಗಿ ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಬರೆದಿದ್ದಾನಲ್ಲಾ!
ಆಗ ನಾನು ದೇವದೂತನನ್ನು ಆರಾಧಿಸಲು ಅವನ ಪಾದದ ಮುಂದೆ ಅಡ್ಡಬಿದ್ದೆನು. ಆದರೆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ಯೇಸುವಿನ ಸತ್ಯವನ್ನು ಹೊಂದಿರುವ ನಿನ್ನಂತೆಯೂ ನಿನ್ನ ಸಹೋದರರಂತೆಯೂ ನಾನು ಒಬ್ಬ ಸೇವಕನಾಗಿದ್ದೇನೆ. ಆದ್ದರಿಂದ ದೇವರನ್ನು ಆರಾಧಿಸು! ಏಕೆಂದರೆ ಯೇಸುವಿನ ಸತ್ಯವೇ ಪ್ರವಾದನೆಯ ಸಾಕ್ಷಿಯಾಗಿದೆ” ಎಂದು ಹೇಳಿದನು.
ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಈ ಕಾರ್ಯಗಳನ್ನು ಮಾಡುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವು ತಿಳಿದುಕೊಳ್ಳುವಂತೆ ನಾನು ಸಾಕ್ಷಿಯನ್ನು ಕೊಡುವೆನು.
ಅವರು ವಾದಮಾಡಿ ಅಲ್ಲಿಂದ ಹೊರಡಲು ಸಿದ್ಧರಾದಾಗ ಪೌಲನು ಅವರಿಗೆ ಹೀಗೆಂದನು: “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಮೂಲಕ ಪಿತೃಗಳಿಗೆ ಸತ್ಯವನ್ನು ತಿಳಿಸಿದನು. ಆತನು ಹೀಗೆ ಹೇಳಿದ್ದಾನೆ:
ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.
ಒಂದು ದಿವಸ ಯೆಹೂದ ಕುಲದ ಕೆಲವರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಬಳಿಗೆ ಬಂದರು. ಅವರಲ್ಲಿ ಕನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಒಬ್ಬನಾಗಿದ್ದನು. ಕಾಲೇಬನು ಯೆಹೋಶುವನಿಗೆ, “ಕಾದೇಶ್‌ಬರ್ನೇಯದಲ್ಲಿ ಯೆಹೋವನು ತನ್ನ ಸೇವಕನಾದ ಮೋಶೆಯೊಂದಿಗೆ ನಮ್ಮಿಬ್ಬರ ವಿಷಯವಾಗಿ ಮಾತಾಡಿದ್ದು ನಿನಗೆ ನೆನಪಿದೆಯಷ್ಟೇ.
ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.
ಎಲೀಷನ ಸೇವಕನು ಹೊತ್ತಾರೆ ನಸುಕಿನಲ್ಲಿಯೇ ಮೇಲಕ್ಕೆದ್ದನು. ಸೇವಕನು ಹೊರಕ್ಕೆ ಹೋದಾಗ ರಥಗಳಿಂದ ಮತ್ತು ಕುದುರೆಗಳಿಂದ ಕೂಡಿದ ಸೈನ್ಯವು ನಗರವನ್ನು ಸುತ್ತುವರಿದಿರುವುದನ್ನು ನೋಡಿದನು! ಆ ಸೇವಕನು ಎಲೀಷನಿಗೆ, “ಅಯ್ಯೋ, ನನ್ನ ಒಡೆಯನೇ, ನಾವು ಈಗ ಏನು ಮಾಡೋಣ?” ಎಂದು ಕೇಳಿದನು.
ಅವಳು ತನ್ನ ಗಂಡನನ್ನು ಕರೆದು, “ದಯವಿಟ್ಟು ಒಬ್ಬ ಸೇವಕನನ್ನೂ ಒಂದು ಹೇಸರಕತ್ತೆಯನ್ನೂ ನನಗೆ ಕಳುಹಿಸಿಕೊಡಿ. ನಾನು ದೇವಮನುಷ್ಯನನ್ನು ಕರೆತರಲು ಬೇಗ ಹೋಗಿ ಹಿಂದಿರುಗಿ ಬರುತ್ತೇನೆ” ಎಂದು ಹೇಳಿದಳು.
ಆಗ ಆ ಸ್ತ್ರೀಯು ದೇವರ ಮನುಷ್ಯನ (ಎಲೀಷನ) ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಎಲೀಷನು ಅವಳಿಗೆ, “ಹೋಗು, ಎಣ್ಣೆಯನ್ನು ಮಾರಾಟಮಾಡಿ, ನಿನ್ನ ಸಾಲವನ್ನು ತೀರಿಸು. ಉಳಿದ ಹಣದಲ್ಲಿ ನೀನು ಮತ್ತು ನಿನ್ನ ಮಕ್ಕಳು ಜೀವನಮಾಡಿ” ಎಂದು ಹೇಳಿದನು.
ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೋಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆಷೆತ್‌ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು.