Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:4 - ಪರಿಶುದ್ದ ಬೈಬಲ್‌

4 ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ಆ ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಈ ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಪ್ರಭಾವ ಗುಣಾತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಸೆ ತೆನಿ ಅಮ್ಕಾ ಗೊಸ್ಟ್ ದಿವ್ನ್ ಸಾಂಗಲ್ಲೆ ಲೈ ಮೊಟೆ ಅನಿ ಕಿಮ್ತಿಚೆ ವರು ದಿಲ್ಯಾನಾಯ್, ಅಸೆ ಹ್ಯಾ ವರುಕ್ ಲಾಗುನ್ ತೆನಿ ಹ್ಯಾ ಜಗಾಚ್ಯಾ ನಾಸ್ ಹೊವ್ನ್ ಜಾತಲ್ಯಾ ಬುರ್ಶ್ಯಾಪಾನಾತ್ನಾ ಚುಕ್ವುನ್ ಘೆವ್ಚೆ ಅನಿ ದೆವಾಚ್ಯಾ ಗುನಾತ್ ವಾಟೊ ಘೆಯ್ ಸಾರ್ಕೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:4
25 ತಿಳಿವುಗಳ ಹೋಲಿಕೆ  

ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.


ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಈ ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಈ ಹೊಸ ಜೀವನ ಕೊಡುತ್ತದೆ.


ಈ ಲೋಕದ ನಮ್ಮ ತಂದೆಗಳು ನಮ್ಮನ್ನು ಸ್ವಲ್ಪಕಾಲ ದಂಡಿಸಿದರು. ಅವರು ತಮಗೆ ಉತ್ತಮವೆಂದು ತೋರಿದ ರೀತಿಯಲ್ಲಿ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ನಮಗೆ ಸಹಾಯ ಮಾಡಲು ನಮ್ಮನ್ನು ಶಿಕ್ಷಿಸುತ್ತಾನೆ. ಏಕೆಂದರೆ ನಾವೂ ಆತನಂತೆ ಪರಿಶುದ್ಧರಾಗಬೇಕೆಂಬುದೇ ಆತನ ಉದ್ದೇಶ.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


“ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.”


ಒಬ್ಬನು ತನ್ನ ಶರೀರಭಾವವನ್ನು ತೃಪ್ತಿಪಡಿಸುವುದಕ್ಕಾಗಿ ಪಾಪ ಕಾರ್ಯಗಳನ್ನು ಮಾಡಿದರೆ ಆ ಶರೀರಭಾವವು ಅವನಿಗೆ ನಿತ್ಯನಾಶವನ್ನು ಬರಮಾಡುತ್ತದೆ. ಆದರೆ ಒಬ್ಬನು ಪವಿತ್ರಾತ್ಮನನ್ನು ಮೆಚ್ಚಿಸುವುದಕ್ಕಾಗಿ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿದ್ದರೆ, ಅವನು ಪವಿತ್ರಾತ್ಮನಿಂದ ನಿತ್ಯಜೀವವನ್ನು ಹೊಂದಿಕೊಳ್ಳುವನು.


ಕ್ರಿಸ್ತನು ನಮಗೆ ಕೊಡುವುದಾಗಿ ಮಾಡಿದ್ದ ವಾಗ್ದಾನವೇ ಈ ನಿತ್ಯಜೀವ.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ದೇವರು ಮಾಡಿದ ವಾಗ್ದಾನಗಳಿಗೆಲ್ಲ “ಹೌದು” ಎಂಬ ಉತ್ತರ ಕ್ರಿಸ್ತನೇ ಆಗಿದ್ದಾನೆ. ಆದ್ದರಿಂದಲೇ ನಾವು ದೇವರ ಮಹಿಮೆಗಾಗಿ ಕ್ರಿಸ್ತನ ಮೂಲಕ “ಆಮೆನ್” ಎಂದು ಹೇಳುತ್ತೇವೆ.


ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.


ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.


ನಾವೆಲ್ಲರೂ ಒಂದೇ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಐಕ್ಯರಾಗುವತನಕ ಈ ಸೇವೆಯು ಮುಂದುವರಿಯಬೇಕು. ನಾವು ಪರಿಪೂರ್ಣರಾಗುವ ತನಕ ಅಂದರೆ ಕ್ರಿಸ್ತನ ಸರ್ವಸಂಪೂರ್ಣತೆಯನ್ನು ಮುಟ್ಟುವತನಕ ಬೆಳೆಯಬೇಕು.


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ಕೆಲವು ಜನರು ತಿಳಿದುಕೊಂಡಿರುವಂತೆ, ಪ್ರಭುವು ತಾನು ವಾಗ್ದಾನ ಮಾಡಿದ್ದನ್ನು ತಡವಾಗಿ ನೆರವೇರಿಸುವುದಿಲ್ಲ. ದೇವರು ನಿಮ್ಮ ವಿಷಯದಲ್ಲಿ ಇನ್ನೂ ತಾಳ್ಮೆಯಿಂದಿದ್ದಾನಷ್ಟೆ. ಯಾವ ವ್ಯಕ್ತಿಯೂ ಕಳೆದುಹೋಗಬಾರದೆಂಬುದು ದೇವರ ಅಪೇಕ್ಷೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಹೃದಯಗಳನ್ನು ಪರಿವರ್ತಿಸಿಕೊಂಡು, ಪಾಪ ಮಾಡುವುದನ್ನು ನಿಲ್ಲಿಸಬೇಕೆಂಬುದು ದೇವರ ಅಪೇಕ್ಷೆ.


ನಾವಾದರೋ ದೇವರು ವಾಗ್ದಾನ ಮಾಡಿರುವ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಎದುರುನೋಡುತ್ತಿದ್ದೇವೆ. ನೀತಿಯು ಅವುಗಳಲ್ಲಿ ವಾಸವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು