2 ಪೇತ್ರನು 2:1 - ಪರಿಶುದ್ದ ಬೈಬಲ್1 ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಲೊಕಾಚ್ಯಾ ಮದ್ದಿ ಝುಟೆ ಪ್ರವಾದಿ ಉಟಲ್ಲ್ಯಾ ಸಾರ್ಕೆ ಝುಟಿ ಶಿಕಾಪಾ ಶಿಕ್ವುತಲೆಬಿ ಉಟ್ತಾತ್ ತೆನಿ ನಾಶ್ ಹೊತಲಿ ಶಿಕಾಪಾ ಹಾನ್ತ್ಯಾತ್, ಅನಿ ಅಪ್ನಾಕುಚ್ ಇಕಾತ್ ಘೆಟಲ್ಲ್ಯಾ ಧನಿಯಾಕುಚ್ ಕಾಯ್ಬಿ ನ್ಹಯ್ ಸಾರ್ಕೆ ಕರ್ತಾತ್, ಅನಿ ಅಸೆಚ್ ತೆನಿ ಅಪ್ನಾ ವರ್ತಿ ನಾಶ್ ಹಾನುನ್ ಘೆತಾತ್. ಅಧ್ಯಾಯವನ್ನು ನೋಡಿ |
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.
ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.