2 ಪೇತ್ರನು 2:14 - ಪರಿಶುದ್ದ ಬೈಬಲ್14 ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತೆನಿ ವೆಭಿಚಾರಾನ್ ಭರಲ್ಲ್ಯಾ ಡೊಳ್ಯಾಂಚೆ ಹೊವ್ನ್ ಹಾತ್, ತೆನಿ ವಿಶ್ವಾಸ್ ನಸಲ್ಲೆ ಪಾಪಾಚ್ಯಾ ಪಾಸಿತ್ ಪಾಡ್ವುತಾತ್, ತೆನಿ ಅಪ್ನಾ ಮನಾಕ್ನಿ ಬರೆ ದಿಸ್ತಲೆಚ್ ಚಿಂತತಾತ್, ಅನಿ ಶಾಪಾಕ್ ಗುರಿ ಹೊಲಾತ್. ಅಧ್ಯಾಯವನ್ನು ನೋಡಿ |
ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.
ಆ ಪಟ್ಟಣದಲ್ಲಿ ಹುಟ್ಟಿದ ಶಿಶುಗಳೆಲ್ಲಾ ಜೀವಿಸುವವು. ಯಾವ ಮಗುವೇ ಆಗಲಿ ಹುಟ್ಟಿದ ಕೂಡಲೇ ಸಾಯುವದಿಲ್ಲ. ಆ ಪಟ್ಟಣದ ನಿವಾಸಿಗಳಲ್ಲಿ ಯಾರೂ ಕಡಿಮೆ ಆಯುಷ್ಯದಿಂದ ಸಾಯುವದಿಲ್ಲ. ಪ್ರತಿಯೊಂದು ಮಗುವೂ ದೀರ್ಘಾಯುಷ್ಯವನ್ನು ಹೊಂದುವದು. ಪ್ರತಿಯೊಬ್ಬ ಯುವಕನೂ ಬಹಳ ಕಾಲ ಜೀವಿಸುವನು. ಆಗ ನೂರು ವರ್ಷ ಪ್ರಾಯದವನು ಸಹ ಯೌವನಸ್ಥನೆಂದು ಕರೆಯಲ್ಪಡುವನು. ಒಬ್ಬನು ನೂರು ವರ್ಷವಾದರೂ ಬಾಳದಿದ್ದರೆ, ಜನರು ಅವನನ್ನು ಶಾಪ ಹೊಂದಿದವನೆಂದು ಹೇಳುವರು.
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನ್ನು ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನ್ನು ನೀವು ತಯಾರಿಸುತ್ತೀರಿ. ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕೂ ನೀವು ಇದನ್ನು ಮಾಡುತ್ತೀರಿ.