15 ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.
ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು.
ಯಾಕೆಂದರೆ ಅವರು ಇಸ್ರೇಲರಿಗೆ ಆಹಾರವನ್ನಾಗಲಿ ನೀರನ್ನಾಗಲಿ ಕೊಟ್ಟಿರಲಿಲ್ಲ. ಅಲ್ಲದೆ ಅವರು ಬಿಳಾಮನಿಗೆ ಹಣಕೊಟ್ಟು ಇಸ್ರೇಲರನ್ನು ಶಪಿಸುವಂತೆ ಮಾಡಿದರು. ಆದರೆ ನಮ್ಮ ದೇವರು ಆ ಶಾಪವನ್ನು ನಮಗೆ ಆಶೀರ್ವಾದವಾಗುವಂತೆ ಮಾಡಿದರು.
ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”
ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು. ಈ ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ. ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ.
ಅವನಿಗೆ, “ನೀನು ಸೈತಾನನ ಮಗ! ಪ್ರತಿಯೊಂದು ಒಳ್ಳೆಯದಕ್ಕೂ ನೀನು ಶತ್ರು! ನೀನು ದುಷ್ಟತಂತ್ರಗಳಿಂದಲೂ ಸುಳ್ಳುಗಳಿಂದಲೂ ತುಂಬಿದವನಾಗಿರುವೆ. ಪ್ರಭುವಿನ ಸತ್ಯಗಳನ್ನು ಸುಳ್ಳುಗಳನ್ನಾಗಿ ಪರಿವರ್ತಿಸಲು ನೀನು ಯಾವಾಗಲೂ ಪ್ರಯತ್ನಿಸುತ್ತಿರುವೆ!
(ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.
“ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”
ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.”
ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.
ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಬಯಲಿನ ಕಡೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು. ಅವನಿಗೆ ದೂತನು ಕಾಣಿಸಲಿಲ್ಲ.
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.