2 ಪೇತ್ರನು 2:21 - ಪರಿಶುದ್ದ ಬೈಬಲ್21 ಹೌದು, ಆ ಜನರು ಸರಿಯಾದ ಮಾರ್ಗವನ್ನು ತಿಳಿಯದೆ ಹೋಗಿದ್ದರೇ ಒಳ್ಳೆಯದಾಗುತ್ತಿತ್ತು. ಸರಿಯಾದ ಮಾರ್ಗವನ್ನು ಅರಿತುಕೊಂಡು, ಪವಿತ್ರ ಬೋಧನೆಗಳಿಗೆ ವಿಮುಖರಾಗುವುದಕ್ಕಿಂತ ಅದನ್ನು ತಿಳಿದುಕೊಳ್ಳದಿದ್ದರೇ ಚೆನ್ನಾಗಿರುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವರು ನೀತಿಯ ಮಾರ್ಗವನ್ನು ಅರಿತುಕೊಂಡು ತಾವು ಸ್ವೀಕರಿಸಿದ ಪವಿತ್ರ ಆಜ್ಞೆಯನ್ನು ತಿರಸ್ಕರಿಸುವುದಕ್ಕಿಂತ ಅದನ್ನು ಅರಿಯದವರಾಗಿದ್ದರೆ ಒಳ್ಳೆಯದಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ನೀತಿ ಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದಿದ್ದರೆ ಮೇಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರು ನೀತಿಮಾರ್ಗವನ್ನು ತಿಳಿದುಕೊಂಡ ಮೇಲೆ ತಮಗೆ ಕೊಡಲಾದ ಪವಿತ್ರ ಆಜ್ಞೆಯಿಂದ ತೊಲಗಿ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತ್ಯಾ ಲೊಕಾನಿ ನಿತಿವಂತ್ಪಾನಾಚಿ ವಾಟ್ ಕಳ್ವುನ್ ಘೆವ್ನ್ ಅಪ್ನಾಕ್ ದಿವ್ನ್ ಹೊಲ್ಲ್ಯಾ ಪವಿತ್ರ್ ಹುಕುಮಾಕ್ನಿ ಸೊಡುನ್ ಜಾತಲ್ಯಾಕಿಂತಾ ಬರಿ ಹೊತ್ತಿ ವಾಟ್ ಕಳಿ ನಸ್ತಾನಾ ರಾಲ್ಯಾರುಚ್ ಬರೆ ಹೊಯ್ ಹೊತ್ತೆ, ಖರಿ ವಾಟ್ ಕಳ್ವುನ್ ಘೆವ್ನ್ ಬಿ ಪವಿತ್ರ್ ಶಿಕಾಪಾಕ್ನಿ ಧುರ್ ಕರ್ತಲ್ಯಾಕಿಂತಾ ತೆ ಕಳ್ವುನ್ ಗೆಯ್ ನಸ್ತಾನಾ ಹೊತ್ತೆಚ್ ಬರೆ ಹೊತಾ. ಅಧ್ಯಾಯವನ್ನು ನೋಡಿ |
“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.
ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.