Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:10 - ಪರಿಶುದ್ದ ಬೈಬಲ್‌

10 ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಲಯವಾಗಿ ಹೋಗುವವು, ಭೂವಿುಯೂ ಅದರಲ್ಲಿರುವ ಕೆಲಸಗಳೂ ಸುಟ್ಟುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಧನಿಯಾಚೊ ದಿಸ್ ಚೊರಾ ಸಾರ್ಕೊ ಯೆತಾ, ತ್ಯಾ ದಿಸಿ ಮಳ್ಬಾ ಮೊಟ್ಯಾ ಅವಾಜ್ಯಾ ವಾಂಗ್ಡಾ ನಾ ಪತ್ತೊ ಹೊವ್ನ್ ಜಾತಾ, ಅನಿ ಮುಳ್ ಆಗಿನ್ ಕಡುನ್ ಜಾತಾತ್ ಅನಿ ಜಿಮ್ನಿ ವರ್ತಿ ಹೊತ್ತಿ ಸಗ್ಳಿ ಸಾಮಾನಾ ಜಳುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:10
36 ತಿಳಿವುಗಳ ಹೋಲಿಕೆ  

ನಂತರ ನೂತನ ಪರಲೋಕವನ್ನು ಮತ್ತು ನೂತನ ಭೂಮಿಯನ್ನು ನಾನು ನೋಡಿದೆನು. ಮೊದಲನೆ ಪರಲೋಕ ಮತ್ತು ಮೊದಲನೆ ಭೂಮಿ ಅದೃಶ್ಯವಾಗಿದ್ದವು. ಅಲ್ಲಿ ಸಮುದ್ರವಿರಲಿಲ್ಲ.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.


“ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”


ಪರಲೋಕದ ಕಡೆಗೆ ದೃಷ್ಟಿಸಿರಿ. ನಿಮ್ಮ ಸುತ್ತಲೂ ಇರುವ ಭೂಮಿಯನ್ನು ನೋಡಿರಿ. ಹೊಗೆಯ ಮೋಡದಂತೆ ಆಕಾಶವು ಇಲ್ಲದೆಹೋಗುವದು. ಭೂಮಿಯು ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವುದು. ಭೂಮಿಯ ಮೇಲಿರುವ ಜನರು ಸಾಯುವರು. ಆದರೆ ನನ್ನ ರಕ್ಷಣೆಯು ನಿರಂತರವಾಗಿರುವದು. ನನ್ನ ಕರುಣೆಯು ಅಂತ್ಯವಾಗದು.


ಪ್ರಭುವು ಪ್ರತ್ಯಕ್ಷನಾಗುವ ದಿನವು ರಾತ್ರಿಕಾಲದಲ್ಲಿ ಕಳ್ಳನು ಬರುವಂತೆ ಇದ್ದಕ್ಕಿದ್ದಂತೆ ಬರುತ್ತದೆ ಎಂಬುದು ನಿಮಗೆಲ್ಲ ಚೆನ್ನಾಗಿ ತಿಳಿದಿದೆ.


ಭೂಮ್ಯಾಕಾಶಗಳು ನಾಶವಾಗುತ್ತವೆ. ಆದರೆ ನಾನು ಹೇಳಿದ ಮಾತುಗಳು ಎಂದೆಂದಿಗೂ ನಾಶವಾಗುವುದಿಲ್ಲ.


ನೀವು ದೇವರ ದಿನಕ್ಕಾಗಿ ಅಪೇಕ್ಷಿಸುತ್ತಾ ಎದುರು ನೋಡುತ್ತಿರಬೇಕು. ಆ ದಿನವು ಬಂದಾಗ, ಆಕಾಶವು ಬೆಂಕಿಯಿಂದ ನಾಶವಾಗುತ್ತದೆ ಮತ್ತು ಆಕಾಶದಲ್ಲಿರುವ ಪ್ರತಿಯೊಂದೂ ಬೆಂಕಿಯಿಂದ ಕರಗಿ ಹೋಗುತ್ತದೆ.


ಆಕಾಶವು ಸುರುಳಿಯಂತೆ ಮುಚ್ಚಿಹೋಗುವದು. ನಕ್ಷತ್ರಗಳು ದ್ರಾಕ್ಷಾಲತೆಯ ಒಣಗಿದ ಎಲೆಗಳಂತೆಯೂ ಅಂಜೂರದ ಒಣಗಿದ ಎಲೆಗಳಂತೆಯೂ ಉದುರಿಬೀಳುವವು. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಗಳು ಕರಗಿಹೋಗುವವು.


ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.


“ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ!


ಲೋಕವೂ ಆಕಾಶವೂ ಕೊನೆಗೊಳುತ್ತವೆ. ನೀನಾದರೊ ಶಾಶ್ವತವಾಗಿರುವೆ! ಅವು ಬಟ್ಟೆಗಳಂತೆ ಹಳೆಯದಾಗುತ್ತವೆ. ನೀನು ಅವುಗಳನ್ನು ಉಡುಪುಗಳಂತೆ ಬದಲಾಯಿಸುವೆ. ಅವುಗಳೆಲ್ಲಾ ಬದಲಾಗುತ್ತವೆ.


ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.


ಯೆಹೋವನು ಬರುತ್ತಾನೆ. ಪರ್ವತಗಳು ಭಯದಿಂದ ನಡುಗುವವು. ಬೆಟ್ಟಗಳು ಕರಗಿಹೋಗುವವು. ಯೆಹೋವನು ಬರುತ್ತಾನೆ, ಮತ್ತು ಭೂಮಿಯು ಭಯದಿಂದ ನಡುಗುವುದು. ಇಡೀ ಪ್ರಪಂಚ ಮತ್ತು ಅದರಲ್ಲಿರುವ ಜನರೆಲ್ಲಾ ಭಯದಿಂದ ನಡುಗುವರು.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತಾಗುವನು. ಆಗ ಯೆಹೋವನ ಭಯಂಕರ ದಿನವು ಬರುವುದು.


ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಭೂಮಿಯನ್ನು ಸ್ಪರ್ಶಿಸುವನು. ಆಗ ಅದು ಕರಗಿಹೋಗುವುದು. ದೇಶದಲ್ಲಿ ವಾಸಿಸುವ ಜನರೆಲ್ಲಾ ಸತ್ತುಹೋದವರಿಗಾಗಿ ಗೋಳಾಡುವರು. ಈಜಿಪ್ಟಿನ ನೈಲ್ ನದಿಯಂತೆ ದೇಶದಲ್ಲಿ ಏರಿಳಿತ ಉಂಟಾಗುವುದು.


ಆ ಮನುಷ್ಯನ ಪಾಪಸ್ವಭಾವವು ನಾಶವಾಗುವುದಕ್ಕಾಗಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಿರಿ. ಆಗ ಪ್ರಭುವಿನ ದಿನದಂದು ಅವನ ಜೀವಾತ್ಮವು ರಕ್ಷಣೆಹೊಂದಲು ಸಾಧ್ಯವಾಗುವುದು.


ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದುಹೋಗುತ್ತವೆ.


ಭೂಕಂಪಗಳಾಗುವವು. ಭೂಮಿಯು ಸೀಳಿಹೋಗುವದು.


ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಬೆಟ್ಟಗಳು ಮೇಣದಂತೆ ಕರಗಿಹೋಗುತ್ತವೆ.


ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು, ಆಗ ಉಳುವವನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ ಮೀರಿಸಿ ಮುಂದೆ ಹೋಗುವನು. ಬೆಟ್ಟಗಳಿಂದಲೂ ಪರ್ವತಗಳಿಂದಲೂ ಸಿಹಿ ದ್ರಾಕ್ಷಾರಸವು ಹರಿದುಬರುವುದು.


ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ. ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. ಯೆಹೋವನ ಮಹಾದಿನವು ಬರಲಿದೆ; ಯೆಹೋವನ ಮಹಾದಿನವು ಹತ್ತಿರವೇ ಇದೆ.


ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.


ಸರ್ವಶಕ್ತನಾದ ಯೆಹೋವನು ಒಂದು ವಿಶೇಷ ದಿನವನ್ನು ಯೋಜಿಸಿರುತ್ತಾನೆ. ಆ ದಿನದಲ್ಲಿ ಯೆಹೋವನು ಅಹಂಕಾರಿಗಳನ್ನೂ ಜಂಬಕೊಚ್ಚಿಕೊಳ್ಳುವವರನ್ನೂ ಶಿಕ್ಷಿಸುವನು. ಆಗ ಆ ಅಹಂಕಾರಿಗಳನ್ನು ಜನರು ದೊಡ್ಡಜನರೆಂದು ಪರಿಗಣಿಸುವುದಿಲ್ಲ.


ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ:


ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.


ತೀರ್ಮಾನದ ತಗ್ಗಿನಲ್ಲಿ ಅನೇಕರು ಸೇರಿದ್ದಾರೆ. ಯೆಹೋವನ ವಿಶೇಷ ದಿನವು ತೀರ್ಮಾನದ ತಗ್ಗಿನ ಹತ್ತಿರ ಬಂದಿದೆ.


ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.


ದೇವದೂತರು ಅಧಿಕಾರವನ್ನು ಹೊಂದಿದ್ದರೂ ಅದನ್ನು ಉಳಿಸಿಕೊಳ್ಳಲಾರದೆ ಸ್ವಂತ ವಾಸಸ್ಥಾನವನ್ನು ಬಿಟ್ಟುಹೋದದ್ದನ್ನು ನೆನಸಿಕೊಳ್ಳಿರಿ. ಆದ್ದರಿಂದ ಪ್ರಭುವು ಈ ದೇವದೂತರನ್ನು ಅಂಧಕಾರದಲ್ಲಿಟ್ಟನು. ಅವರನ್ನು ಶಾಶ್ವತವಾದ ಬೇಡಿಗಳಿಂದ ಬಂಧಿಸಲಾಯಿತು. ಮಹಾದಿನದಂದು ಅವರಿಗೆ ತೀರ್ಪು ನೀಡುವುದಕ್ಕಾಗಿ ಆತನು ಅವರನ್ನು ಅಲ್ಲಿಟ್ಟಿದ್ದಾನೆ.


ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.


ಆದರೆ ಸಹೋದರ ಸಹೋದರಿಯರೇ, ನೀವು ಕತ್ತಲಿನಲ್ಲಿ (ಪಾಪದಲ್ಲಿ) ವಾಸಿಸುತ್ತಿಲ್ಲ. ಆ ದಿನವು ನಿಮಗೆ ಕಳ್ಳನಂತೆ ಇದ್ದಕ್ಕಿದ್ದಂತೆ ಬರುವುದಿಲ್ಲ.


ನಾನು ನಿಮಗೆ ಹೇಳಿದಂತಹ ರೀತಿಯಲ್ಲಿಯೇ ಎಲ್ಲವೂ ನಾಶಗೊಳ್ಳುತ್ತವೆ. ಆದ್ದರಿಂದ ನೀವು ಎಂತಹ ಜನರಾಗಿರಬೇಕು? ನೀವು ಪರಿಶುದ್ಧರಾಗಿರಬೇಕು ಮತ್ತು ಭಕ್ತಿವುಳ್ಳವರಾಗಿರಬೇಕು.


ಆಕಾಶವು ವಿಭಾಗಗೊಂಡು ಸುರುಳಿಯಂತೆ ಸುತ್ತಲ್ಪಟ್ಟಿತು. ಪ್ರತಿಯೊಂದು ಬೆಟ್ಟ ಮತ್ತು ದ್ವೀಪಗಳು ತಮ್ಮ ನೆಲೆಯಿಂದ ಚಲಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು