2 ಪೇತ್ರನು 3:14 - ಪರಿಶುದ್ದ ಬೈಬಲ್14 ಪ್ರಿಯ ಸ್ನೇಹಿತರೇ, ಇವುಗಳಿಗಾಗಿಯೇ ನಾವು ಎದುರುನೋಡುತ್ತಿದ್ದೇವೆ. ಆದ್ದರಿಂದ ನೀವು ಪಾಪವಿಲ್ಲದವರಾಗಿರಲು ಮತ್ತು ತಪ್ಪಿಲ್ಲದವರಾಗಿರಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿರಿ. ದೇವರೊಂದಿಗೆ ಸಮಾಧಾನದಿಂದಿರಲು ಪ್ರಯತ್ನಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತಸೆ ಮಜ್ಯಾ ಪ್ರಿತಿಚ್ಯಾನು ಹ್ಯಾ ಘಡಿತ್ತಾಚಿ ತುಮಿ ವಾಟ್ ಬಗುನ್ಗೆತ್ ಹಾಸಿ, ಅಸೆ ರಾತಾನಾ ಸಮಾದಾನಾನ್ ಬರ್‍ಯಾ ಭುತ್ತುರ್‍ಲ್ಯಾ ಮನಾಚಿ ಲೊಕಾ ಹೊವ್ನ್ ದೆವಾಕ್ ಭೆಟುಕ್ ಪವಿತ್ರ್ ಅನಿ ಚುಕ್ ನಸಲ್ಲೆ ಜಿವನ್ ಕರುಕ್ ಕಟ್ಪಟ್ ಕರಾ. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.