2 ಪೇತ್ರನು 3:15 - ಪರಿಶುದ್ದ ಬೈಬಲ್15 ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ಇದೇ ಅಭಿಪ್ರಾಯಕ್ಕೆ ಸರಿಯಾಗಿ ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಧನಿಯಾನ್ ಎವ್ಡೆ ಲೈ ಎಳ್ ಅಮ್ಕಾ ಸೊಸುನ್ ಘೆಟಲ್ಲೆ ಅಮ್ಚ್ಯಾ ಸುಟ್ಕೆಸಾಟ್ನಿ ಎಕ್ ಅವ್ಕಾಸ್ ಮನುನ್ ಘೆವಾ, ಅಮ್ಚ್ಯಾ ಪ್ರಿತಿಚ್ಯಾ ಭಾವ್ ಪಾವ್ಲುನ್ಬಿ ಅಪ್ನಾಕ್ ಗಾವಲ್ಲ್ಯಾ ಶಾನ್ಪಾನಾಚ್ಯಾ ಪರ್ಕಾರ್ ಹೆಚ್ಯಾ ವಿಶಯಾತ್ ಚಿಟ್ ಲಿವ್ನ್ ಸಾಂಗಟಲ್ಲೆ ಹಾಯ್. ಅಧ್ಯಾಯವನ್ನು ನೋಡಿ |
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.
ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.