2 ಪೇತ್ರನು 3:2 - ಪರಿಶುದ್ದ ಬೈಬಲ್2 ಪರಿಶುದ್ಧರಾದ ಪ್ರವಾದಿಗಳು ಹಿಂದಿನಕಾಲದಲ್ಲಿ ಹೇಳಿದ್ದನ್ನು ನೀವು ಜ್ಞಾಪಿಸಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ. ನಮ್ಮ ರಕ್ಷಕನಾದ ಪ್ರಭುವು ನಿಮ್ಮ ಅಪೊಸ್ತಲರ ಮೂಲಕ ನೀಡಿದ ಆಜ್ಞೆಯನ್ನು ನೆನಪು ಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ಸರಳ ಮನಸ್ಸನ್ನು ಪ್ರೇರಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ನಮಗೆ ಕರ್ತ ಹಾಗೂ ರಕ್ಷಕ ಆಗಿರುವವರು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಬಯಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಪವಿತ್ರ್ ಪ್ರವಾದ್ಯಾನಿ ಪಾಟಿ ಎಳಾರ್ ಸಾಂಗಲ್ಲೆ ತುಮಿ ಯಾದ್ ಕರುನ್ ಘೆವ್ಚೆ ಮನ್ತಲಿ ಮಾಜಿ ಆಶ್ಯಾ, ಅಮ್ಚೊ ರಾಕ್ವನ್ಕಾರಿ ಧನಿಯಾನ್ ತುಮ್ಚ್ಯಾ ಅಪೊಸ್ತಲಾಂಚ್ಯಾ ವೈನಾ ದಿಲ್ಲಿ ಹುಕುಮಾ ಸಗ್ಳಿ ಯಾದ್ ಕರುನ್ ಘೆವಾ. ಅಧ್ಯಾಯವನ್ನು ನೋಡಿ |
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.
ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.