Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:5 - ಪರಿಶುದ್ದ ಬೈಬಲ್‌

5 ಆದರೆ ಬಹಕಾಲದ ಹಿಂದೆ ಏನು ನಡೆಯಿತೆಂಬುದನ್ನು ನೆನಪು ಮಾಡಿಕೊಳ್ಳಲು ಅವರಿಗೆ ಇಷ್ಟವಿಲ್ಲ. ಆದಿಯಲ್ಲಿ ದೇವರು ಆಕಾಶವನ್ನು ಸೃಷ್ಟಿಸಿದನು. ದೇವರು ಲೋಕವನ್ನು ನೀರೊಳಗಿಂದ ಮತ್ತು ನೀರಿನಿಂದ ಸೃಷ್ಟಿಸಿದನು. ದೇವರ ವಾಕ್ಯದಿಂದ ಇವೆಲ್ಲಾ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ, ಅವರು ಒಂದು ವಿಷಯವನ್ನು ಉದ್ದೇಶಪೂರ್ವಕವಾಗಿ ಮರೆತುಬಿಡುತ್ತಾರೆ. ಅದೇನೆಂದರೆ, ಪ್ರಾರಂಭದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದಿಂದಲೇ ಉಂಟಾದವು. ಜಲದಿಂದ, ಜಲದ ಮೂಲಕ ಭೂಮಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗೆ ಮಾತಾಡುವವರು ಒಂದು ಸಂಗತಿಯನ್ನು ತಿಳಿದರೂ ಬೇಕೆಂದು ಮರೆತು ಬಿಡುತ್ತಾರೆ; ಅದೇನಂದರೆ - ಪೂರ್ವಕಾಲದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನಿಂದ ಉಂಟಾಗಿ ನೀರಿನಿಂದ ಆಧಾರಗೊಂಡಿರುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಪೂರ್ವಕಾಲದಲ್ಲಿ ದೇವರ ವಾಕ್ಯದಿಂದ ಆಕಾಶವು ಅಸ್ತಿತ್ವಕ್ಕೆ ಬಂದಿತು ಎಂತಲೂ ಜಲದಿಂದ ಜಲದ ಮೂಲಕ ಭೂಮಿಯು ಉಂಟಾಯಿತೆಂಬುದನ್ನು ಅವರು ಬೇಕೆಂತಲೇ ಮರೆತುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಲೈ ಯೆಳಾಚ್ಯಾ ಪಾಟಿ ಕಾಯ್ ಹೊಲೆ ಮನ್ತಲೆ ಯಾದ್ ಕರುನ್ ಘೆವ್ಕ್ ತೆಂಕಾ ಮನ್ ನಾ, ಸಗ್ಳ್ಯಾನ್ ಅದ್ದಿ ದೆವಾನ್ ಮಳಬ್ ರಚಲ್ಯಾನ್ ದೆವಾಚ್ಯಾ ಗೊಸ್ಟಿ ವೈನಾ ಅದ್ಲ್ಯಾ ಯೆಳಾತ್ನಾ ಅತ್ತಾಚ್ಯಾ ಯೆಳಾ ಪತರ್ ಸಗ್ಳೆ ಹಾಯ್, ಅನಿ ಜಿಮಿನ್ ಬಿ ಪಾನಿಯಾ ವರ್ತಿ ಟೆಕುನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:5
11 ತಿಳಿವುಗಳ ಹೋಲಿಕೆ  

ದೇವರು ತನ್ನ ಆಜ್ಞೆಯಿಂದ ಈ ಲೋಕವನ್ನು ಸೃಷ್ಟಿಸಿದನೆಂಬುದನ್ನು ಅರ್ಥಮಾಡಿಕೊಳ್ಳಲು ನಂಬಿಕೆ ನಮಗೆ ಸಹಾಯ ಮಾಡುತ್ತದೆ. ಹೇಗೆಂದರೆ ನಮ್ಮ ಕಣ್ಣಿಗೆ ಕಾಣುವಂಥ ವಸ್ತುಗಳಿಂದ ಈ ಜಗತ್ತು ಸೃಷ್ಟಿಯಾಗಲಿಲ್ಲ.


ಬಳಿಕ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಟ್ಟಿಗೆ ಸೇರಿಕೊಂಡು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.


ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು ಆತನೇ. ಅದನ್ನು ಜಲರಾಶಿಗಳ ಮೇಲೆ ಕಟ್ಟಿದವನೂ ಆತನೇ.


ಬಳಿಕ ದೇವರು, “ಜಲಸಮೂಹಗಳ ನಡುವೆ ಗುಮಟ ಉಂಟಾಗಲಿ. ಅದು ಕೆಳಭಾಗದ ನೀರುಗಳನ್ನು ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಲಿ” ಅಂದನು.


ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ. ಆತನ ಪ್ರೀತಿ ಶಾಶ್ವತವಾದದ್ದು.


ಯೆಹೋವನು ಆಜ್ಞಾಪಿಸಲು ಆಕಾಶವು ಸೃಷ್ಟಿಯಾಯಿತು! ಆತನ ಉಸಿರು ಭೂಮಿಯ ಮೇಲಿರುವ ಸಮಸ್ತವನ್ನು ಸೃಷ್ಟಿಸಿತು.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ಅವುಗಳಿಗಿಂತ ಮೊದಲೇ ಕ್ರಿಸ್ತನಿದ್ದನು. ಸಮಸ್ತಕ್ಕೂ ಆತನೇ ಆಧಾರಭೂತನಾಗಿದ್ದಾನೆ.


ಮೂಢನಲ್ಲಿ ಹಣವಿದ್ದರೂ ಪ್ರಯೋಜನವಿಲ್ಲ. ಯಾಕೆಂದರೆ ಜ್ಞಾನವನ್ನು ಪಡೆದುಕೊಳ್ಳುವುದಕ್ಕೆ ಅವನ ಹಣ ನಿಷ್ಪ್ರಯೋಜಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು