2 ಪೇತ್ರನು 3:7 - ಪರಿಶುದ್ದ ಬೈಬಲ್7 ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಈಗಿರುವ ಭೂಮ್ಯಾಕಾಶಗಳು ಅದೇ ವಾಕ್ಯದ ಬಲದಿಂದ ಬೆಂಕಿಯ ಮೂಲಕ ನಾಶವಾಗುವದಕ್ಕೆ ಇಡಲ್ಪಟ್ಟಿವೆ; ಮತ್ತು ಭಕ್ತಿಹೀನರ ಶಿಕ್ಷಾವಿಧಿಯೂ ನಾಶವೂ ಉಂಟಾಗುವ ದಿನಕ್ಕಾಗಿ ಆ ಬೆಂಕಿ ಸಿದ್ಧವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಖರೆ ಹ್ಯಾ ಯೆಳಾತ್ಲೊ ಮಳ್ಬಾ ಅನಿ ಜಿಮಿನ್ಬಿ ತೆಚ್ಯಾ ಗೊಸ್ಟಿಚ್ಯಾ ವೈರ್ ಆಧಾರ್ ಹೊವ್ನ್ ಹಾಯ್, ಆಗಿತ್ನಾ ನಾಶ್ ಕರುಕ್ ಮನುನ್ ಥವಲ್ಲೆ ಹಾಯ್, ಅನಿ ಥೈಯ್ ದೆವಾಕ್ ಮಾನಿ ನಸಲ್ಲಿ ಲೊಕಾಚಿ ಝಡ್ತಿ ಕರ್ತಲೊ ಅನಿ ನಾಶ್ ಹೊತಲೊ ದಿಸ್ ಯೆಯ್ ಪತರ್ ಅಸೆಚ್ ರ್‍ಹಾತಾ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.